spot_img
Friday, March 13, 2026
spot_img

ಮೂಡ್ಲಕಟ್ಟೆ: ” ಎಮ್ ಐ ಟಿ ಕೆ ಮೀಡಿಯಾ ಕ್ಲಬ್ ಪ್ರೇಮ್ ಎಕ್ಸ್ – ” ಉದ್ಘಾಟನೆ

ಮೂಡ್ಲಕಟ್ಟೆ: ಐಎಂಜೆ ಇನ್ಸ್ಟಿಟ್ಯೂಶನ್ಸ್ ಅಧ್ಯಕ್ಷರಾದ ಸಿದ್ದಾರ್ಥ್ ಜೆ ಶೆಟ್ಟಿ ಅವರ ದೂರ ದೃಷ್ಟಿ ಹಾಗೂ ಮಾರ್ಗದರ್ಶನದ ಅಡಿಯಲ್ಲಿ, ವಿದ್ಯಾರ್ಥಿಗಳಲ್ಲಿ ಸಂವಹನ ಕೌಶಲ್ಯ, ಸೃಜನಶೀಲತೆ ಹಾಗೂ ಮಾಧ್ಯಮ ಸಂಬಂಧಿತ ಜ್ಞಾನವನ್ನು ಅಭಿವೃದ್ಧಿ ಪಡಿಸುವ ಹಾಗೂ ಹೊಸ ಕೌಶಲ್ಯಗಳ ಬೆಳೆಸುವ ಉದ್ದೇಶದಿಂದ ” ಪ್ರೇಮ್ ಎಕ್ಸ್ ” ಹೆಸರಿನ ಮೀಡಿಯಾ ಕ್ಲಬ್ ಅನ್ನು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಉದ್ಘಾಟಕರಾಗಿ ಕುಂದಾಪುರ ತಾಲ್ಲೂಕಿನ ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ರಾಯಪ್ಪನಮಠ ಅವರು ಆಗಮಿಸಿದ್ದರು. ಬ್ಯಾನರ್ ಅನಾವರಣ ಹಾಗೂ ದೀಪ ಪ್ರಜ್ವಲನಗೊಳಿಸುದರ ಮೂಲಕ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಮಾಧ್ಯಮದವರ ಪ್ರಯತ್ನ, ಕಷ್ಟ ಹಾಗೂ ವೃತ್ತಿ ಜೀವನದಲ್ಲಿ ಎದುರಿಸುವ ಸವಾಲುಗಳನ್ನು ತಮ್ಮ ಅನುಭವದ ಮೂಲಕ ಹಂಚಿ ಕೊಂಡರು. ಈ ಕಾಲೇಜು ಆರಂಭವಾದ ದಿನದಿಂದ ತಮಗೆ ಇರುವ ಒಡನಾಟವನ್ನು ನೆನಪಿಸಿಕೊಂಡು, ವಿಧ್ಯಾರ್ಥಿಗಳ ಪ್ರತಿಭೆ ಪ್ರದರ್ಶನಕ್ಕೆ ಈ ಸಂಘ ಒಂದು ಉತ್ತಮ ವೇದಿಕೆಯಾಗಲಿ ಎಂದು ಹೇಳುವುದರ ಜೊತೆಗೆ, ಮೀಡಿಯಾ ಕ್ಲಬ್ ಗೆ ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ ಅವರು ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಈ ಸಂಘದ ಪ್ರಮುಖ ಉದ್ದೇಶವೇನು ಅದನ್ನು ವಿದ್ಯಾರ್ಥಿಗಳು ಹೇಗೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿವರಿಸಿದರು. ಐ ಎಮ್ ಜೆ ಇನ್ಸ್ಟಿಟ್ಯೂಶನ್ಸ್ ಇದರ ಅಕಾಡೆಮಿಕ್ ನಿರ್ದೇಶಕರಾದ ಡಾ. ಎಸ್ ಎನ್ ಭಟ್ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಇಂತಹ ಸಂಘದ ಮಹತ್ವ ಹಾಗೂ ಅದರಿಂದಾಗುವ ಬೆಳವಣಿಗೆಗಳನ್ನು ವಿದ್ಯಾರ್ಥಿಗಳಿಗೆ ಪ್ರಸ್ತುತಪಡಿಸಿದರು. ನಂತರ ಈ ಕ್ಲಬ್ ನ ಆಯೋಗದ ಅಡಿಯಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಮೂರನೇ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ನಂದನ್ ಶೆಟ್ಟಿ ಈ ಕ್ಲಬ್ ನ ಅಧ್ಯಕ್ಷರಾಗಿದ್ದು ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಸಿಕೊಟ್ಟರು.
ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿನಿಯರಾದ ಕರುಣಾ ಆರ್ ಗೌಡ ಮತ್ತು ಇಶ್ರತ್ ನಡೆಸಿಕೊಟ್ಟರು. ಕಾರ್ಯಕ್ರಮದ ಸಂಯೋಜಕಿ ಪ್ರೊಪೇಸರ್ ಸೂಕ್ಷ್ಮ ಎಸ್ ಅಡಿಗ ಸ್ವಾಗತಿಸಿ, ಡಾಟಾ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಲಾವಣ್ಯ ವಂದಿಸಿದರು. ಕಾಲೇಜಿನ ಸಿಬ್ಬಂದಿ ವರ್ಗ, ಮೀಡಿಯ ಕ್ಲಬ್ ಇದರ ಸರ್ವ ಸದಸ್ಯರು ಹಾಗೂ ವಿದ್ಯಾರ್ಥಿಗಳು, ಮತ್ತು ಕಾರ್ಯಕ್ರದ ಯಶಸ್ಸಿಗೆ ಕಾರಣರಾದ ಸಂಯೋಜಕರು ಹಾಗೂ ಮೇಲ್ವಿಚಾರಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!