spot_img
Friday, March 13, 2026
spot_img

ಸಂಶೋಧನೆಯು ಜ್ಞಾನವನ್ನು ಹೆಚ್ಚಿಸುವ ರಹದಾರಿ – ಡಾ. ಕೆ.ಆರ್ ಕವಿತಾ

ಕಾಲೇಜು ವಿದ್ಯಾರ್ಥಿಗಳು ಪ್ರಸ್ತುತ ದಿನಮಾನದಲ್ಲಿ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳುವುದರಿಂದ ನೈಜ ಸಮಸ್ಯೆಗಳನ್ನು ಅನ್ವೇಷಿಸಬಹುದು. ಸಂಶೋಧನೆಯು ನಮ್ಮ ಜ್ಞಾನ ಮಾರ್ಗವನ್ನು ವಿಸ್ತರಿಸುತ್ತದೆ. ಆದ್ದರಿಂದ, ಸಂಶೋಧನೆಯು ಜ್ಞಾನದ ಬಾಗಿಲು ತೆರೆಯುವ ಕೀಲಿ ಕೈ ಇದ್ದಂತೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ವಲಯದ ಜಂಟಿ ನಿರ್ದೇಶಕರಾದ ಡಾ.ಕೆ.ಆರ್ ಕವಿತಾ ಅವರು ಹೇಳಿದರು.
ಶಂಕರನಾರಾಯಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಮತ್ತು ಧಾರವಾಡದ ಬಹುಶಾಸ್ತ್ರೀಯ ವಿಕಾಸ ಸಂಶೋಧನಾ ಕೇಂದ್ರಗಳ ಜಂಟಿ ಸಹಯೋಗದಲ್ಲಿ ‘ಸಂಶೋಧನಾ ವಿಧಾನ ಮತ್ತು ದತ್ತಾಂಶ ವಿಶ್ಲೇಷಣೆ’ ಕುರಿತು ನಡೆದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಸ್ಯಾತ್ಮಕ ವಿಚಾರಗಳನ್ನು ಸಂಶೋಧನೆಗೆ ಆಯ್ಕೆ ಮಾಡಿಕೊಂಡು ಕಾಲೇಜಿನ ವಿದ್ಯಾರ್ಥಿಗಳು ಹೇಗೆ ಸಮಸ್ಯೆಗೆ ಪರಿಹಾರವನ್ನು ಸೂಚಿಸಬಹುದು ಮತ್ತು ಭವಿಷ್ಯದಲ್ಲಿ ಉತ್ತಮ ಪ್ರಯತ್ನದ ಮೂಲಕ ಯಾವ ರೀತಿ ಅಭ್ಯುದಯ ಹೊಂದಬಹುದು ಎನ್ನುವುದನ್ನು ಅರ್ಥೈಸಿದರು. ಸಂಶೋಧನಾ ಲೇಖನಗಳನ್ನು ಬರೆಯುವಾಗ ವಿದ್ಯಾರ್ಥಿಗಳು ಅನುಸರಿಸಬೇಕಾದ ಕ್ರಮಗಳನ್ನು ಕುರಿತು ನಿಖರತೆಯಿರಬೇಕು. ಈ ಕಾಲೇಜಿನಲ್ಲಿ ಹಲವು ವಿಶಿಷ್ಟ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಕಾಲೇಜು ರಾಜ್ಯದಲ್ಲಿ ಉತ್ತಮ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿಕೊಂಡಿದೆ ಎಂದು ಶ್ಲಾಘಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ವೆಂಕಟರಾಮ್ ಭಟ್ ಮಾತನಾಡಿ ಕಾಲೇಜಿನ ಸಾಧನೆಗಳು ಮತ್ತು ಸಂಶೋಧನಾ ಕಾರ್ಯಾಗಾರದ ಉದ್ದೇಶಗಳನ್ನು ವಿಶದಪಡಿಸಿದರು.
ಕಾರ್ಯಕ್ರಮದ ಸಂಯೋಜಕ ಡಾ. ನಾರಾಯಣ ಬಿಲ್ಲವ ಸಂಶೋಧನೆಯು ಬಹುಶಿಸ್ತೀಯ ಆಯಾಮವನ್ನು ಹೊಂದಿದ್ದು ವಿದ್ಯಾರ್ಥಿಗಳು ಈ ಕಾರ್ಯಾಗಾರದ ಸದುಪಯೋಗ ಪಡಿಸಿಕೊಳ್ಳಬೇಕೆಂದು ಅಭಿಪ್ರೇರಣೆ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಅಧ್ಯಯನ ಸಂಸ್ಥೆಯ ಪ್ರೊ. ಎನ್ ಶಿವಣ್ಣ ಮತ್ತು ಧಾರವಾಡದ ಬಹುಶಾಸ್ತ್ರೀಯ ವಿಕಾಸ ಸಂಶೋಧನಾ ಕೇಂದ್ರದ ಡಾ.ಎಸ್.ವಿ. ಹನಗೋಡಿಮಠ್ ಅವರು ಆಗಮಿಸಿದ್ದರು. ಪ್ರಥಮ ಬಿ.ಎ ವಿದ್ಯಾರ್ಥಿನಿ ಭಾವನಾ ಪ್ರಾರ್ಥನೆಗೈದರು. ಸಹಾಯಕ ಪ್ರಾಧ್ಯಾಪಕ ಸಚಿನ್ ಎಸ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಆಂತರಿಕ ಗುಣಮಟ್ಟ ಮತ್ತು ಭರವಸೆ ಕೋಶದ ಸಂಚಾಲಕರಾದ ಡಾ.ನಳಿನಾಶ್ರೀ ಆರ್. ಎನ್ ವಂದಿಸಿದರು. ಕಾಲೇಜಿನ ಎಲ್ಲಾ ತೃತೀಯ ವರ್ಷದ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!