spot_img
Tuesday, March 17, 2026
spot_img

ವಂಡ್ಸೆ ಕ್ಲಸ್ಟರ್ ಮಟ್ಟದ ಎಸ್.ಡಿ.ಎಂ.ಸಿ ಹಾಗೂ ಮುಖ್ಯಶಿಕ್ಷಕರ ತರಬೇತಿ ಕಾರ್ಯಗಾರ

ವಂಡ್ಸೆ: ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇಲ್ಲಿ ಒಂದು ದಿನದ ಕ್ಲಸ್ಟರ್ ಮಟ್ಟದ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಮುಖ್ಯಗುರುಗಳ ತರಬೇತಿ ಕಾರ್ಯಗಾರ ಮಾ.17ರಂದು ನಡೆಯಿತು.

ಸಭಾಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಶಂಕರ್ ರವರು ವಹಿಸಿದ್ದರು. ಪಿ‌ಎಂಶ್ರೀ ಚಿತ್ತೂರು ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಾಜೇಶ್ ಬಾಯರಿ ಉದ್ಘಾಟಿಸಿ ಶಿಕ್ಷಣ ಮತ್ತು ಆರೋಗ್ಯ ಈ ವಿಚಾರದ ಕುರಿತು ಸವಿವರವಾಗಿ ತಿಳಿಸಿದರು.

ವೇದಿಕೆಯಲ್ಲಿ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಉದಯ್ ಕುಮಾರ್ ಶೆಟ್ಟಿ, ಎಸ್.ಡಿ.ಎಂ.ಸಿ ಸಮನ್ವಯ ವೇದಿಕೆಯ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಪ್ರತಿ ಪಂಚಾಯಿತಿ ಮಟ್ಟದಲ್ಲೂ ಈ ಕಾರ್ಯಕ್ರಮ ನಡೆಯಲೆಂದು ಕರೆ ಕೊಟ್ಟರು.

ವಂಡ್ಸೆ ಶಾಲೆಯ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ನಾಗೇಂದ್ರ ಉಡುಪ, ವಂಡ್ಸೆ ಶಾಲೆಯ ಎಸ್.ಡಿ.ಎಂ.ಸಿ ಸದಸ್ಯರಾದ ಸತೀಶ್, ಸರಕಾರಿ ನೌಕರ ಸಂಘದ ಸದಸ್ಯ ಪ್ರತಾಪ್ ಕುಮಾರ್ ಶೆಟ್ಟಿ, ಪ್ರೌಢಶಾಲಾ ಸಹಶಿಕ್ಷಕರ ಸಂಘ ಬೈಂದೂರು ವಲಯದ ಸದಸ್ಯ ಸದಾನಂದ ಶೆಟ್ಟಿ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ವಂಡ್ಸೆಯ ಸಮೂಹ ಸಂಪನ್ಮೂಲ ವ್ಯಕ್ತಿ ಎಮ್. ನಾಗರಾಜ್ ಶೆಟ್ಟಿ ಸ್ವಾಗತಿಸಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ರಾಜೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ರವಿಚಂದ್ರ ಹಾಗೂ ಕೊಲ್ಲೂರು ಸಮೂಹ ಸಂಪನ್ಮೂಲ ವ್ಯಕ್ತಿ ಶೈಲಜಾ ಕಾರ್ಯಕ್ರಮ ನಿರೂಪಿಸಿದರು ಹೊಸಾಡು ಕ್ಲಸ್ಟರಿನ ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!