spot_img
Friday, March 20, 2026
spot_img

ಗಂಗೊಳ್ಳಿ: ಮಲ್ಯರಬೆಟ್ಟು ಸಾರ್ವಜನಿಕ ಹಿಂದು ರುದ್ರಭೂಮಿ ‘ಮುಕ್ತಿ ಧಾಮ’ ಲೋಕಾರ್ಪಣೆ

ಕುಂದಾಪುರ : ಎಷ್ಟೇ  ಶ್ರೀಮಂತರಾಗಿದ್ದರೂ, ಎಷ್ಟೇ ಅಹಂಕಾರ ಇದ್ದರೂ, ಸಮಾಜದಲ್ಲಿ ಅತ್ಯುನ್ನತ ಸ್ಥಾನದಲ್ಲಿದ್ದರೂ ಕೊನೆಗೆ ಬರಬೇಕಾದುದು ಸ್ಮಶಾನಕ್ಕೆ. ಸ್ಮಶಾನದ ಬಗ್ಗೆ ಕೆಲವರಿಗೆ ಬೇರೆ ರೀತಿಯ ಭಾವನೆ ಇದ್ದು, ಸ್ಮಶಾನವನ್ನು ಯಾವ ರೀತಿ ಕಾಣಬೇಕೋ ಆ ರೀತಿಯಲ್ಲೇ ಕಾಣಬೇಕು. ಶಿವನ ಆಲಯ ಇರುವ ಸ್ಮಶಾನವನ್ನು ಅಭಿವೃದ್ಧಿಗೊಳಿಸಿ, ಸಂಪ್ರದಾಯದ0ತೆ ಆ ಪವಿತ್ರ ಸ್ಥಳದಲ್ಲಿ ಶಿವನ ಮೂರ್ತಿಯನ್ನು ಪ್ರತಿಷ್ಠಾಪಿಸಿರುವುದು ಉತ್ತಮ ಕಾರ್ಯ ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು.

ಗ್ರಾಮ ಪಂಚಾಯತ್ ಗಂಗೊಳ್ಳಿ, ಶಾಸಕರ ಪ್ರದೇಶಾಭಿವೃದ್ಧಿ ನಿಧಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ದಾನಿಗಳ ಸಹಕಾರದಿಂದ ಪುನರ್ ನಿರ್ಮಾಗೊಂಡ ಗಂಗೊಳ್ಳಿಯ ಮಲ್ಯರಬೆಟ್ಟು ಸಾರ್ವಜನಿಕ ಹಿಂದು ರುದ್ರಭೂಮಿ ‘ಮುಕ್ತಿ ಧಾಮ’ವನ್ನು ಗುರುವಾರ ಲೋಕಾರ್ಪಣೆಗೊಳಿಸಿ, ನೂತನವಾಗಿ ನಿರ್ಮಿಸಿದ ಶಿವನ ಮೂರ್ತಿಯನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.

ಪುರೋಹಿತರಾದ ಜಿ. ರವೀಶ್ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿ ಆಶೀರ್ವದಿಸಿದರು. ಜಿ.ರಾಮಪ್ಪ ಖಾರ್ವಿ ದಂಪತಿ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡಿದ್ದರು. ಗಂಗೊಳ್ಳಿ ಗ್ರಾಪಂ. ಅಧ್ಯಕ್ಷೆ ಜಯಂತಿ ಖಾರ್ವಿ, ಸದಸ್ಯರಾದ ರಾಜೇಂದ್ರ ಶೇರುಗಾರ್, ಚಂದ್ರ ಖಾರ್ವಿ, ಜಯೇಂದ್ರ ಆರ್ಕಾಟಿ, ಮಹೇಶ (ಅಯ್ಯಪ್ಪ), ಮಮತಾ ಗಾಣಿಗ, ಅಶ್ವಿನಿ ಖಾರ್ವಿ, ರೇಖಾ ಖಾರ್ವಿ, ನಾಗರತ್ನ ಶೇರುಗಾರ್, ಜನ್ನಿ ಖಾರ್ವಿ, ಶ್ರೀ ಜಟ್ಟಿಗೇಶ್ವರ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ಆರ್ಕಾಟಿ, ರಾಘವೇಂದ್ರ ಖಾರ್ವಿ, ಜನಾರ್ದನ ಖಾರ್ವಿ, ಶಿವಪ್ಪ ಖಾರ್ವಿ, ಮಂಜುನಾಥ ಖಾರ್ವಿ, ಗ್ರಾಪಂ ಮಾಜಿ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ನಾಗಪ್ಪಯ್ಯ ಪಟೇಲ್, ವೀರ ಸಾವರ್ಕರ್ ಬಳಗದ ನವೀನ್ ಗಂಗೊಳ್ಳಿ, ತ್ರಾಸಿ ಗ್ರಾಪಂ ಮಾಜಿ ಅಧ್ಯಕ್ಷ ಮಿಥುನ್ ಎಂ.ಡಿ.ಬಿಜೂರು, ಜಯಂತ್ ಶೇರುಗಾರ್ ಮೊದಲಾದವರು ಉಪಸ್ಥಿತರಿದ್ದರು.
ರಾಮಪ್ಪ ಖಾರ್ವಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಕಾರ್ತಿಕ್ ಖಾರ್ವಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!