spot_img
Monday, March 23, 2026
spot_img

ಮಾ.23 ರಿಂದ 27 ರವರೆಗೆ ಶ್ರೀ ಗುಡೇ ಮಹಾಲಿಂಗೇಶ್ವರ ನೂತನ ರಾಜಗೋಪುರ ಸಮರ್ಪಣಾ ಕಾರ್ಯಕ್ರಮ

ಬೈಂದೂರು: ತಾಲ್ಲೂಕಿನ ಹೆರಂಜಾಲು ಗ್ರಾಮದ ಇತಿಹಾಸ ಹಾಗೂ ಪೌರಾಣಿಕ ಪ್ರಸಿದ್ಧವಾದ ಶ್ರೀ ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನೂತನ ರಾಜಗೋಪುರ ನಿರ್ಮಿಸಲಾಗಿದ್ದು, ಸಮರ್ಪಣಾ ಕಾರ್ಯಕ್ರಮದ ಅಂಗವಾಗಿ ಮಾ.23 ರಿಂದ 27 ರವರೆಗೆ ಶ್ರೀ ಕ್ಷೇತ್ರದಲ್ಲಿ ವಿವಿಧ ರೀತಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ಉದ್ಯಮಿ ಹೆಚ್.ಜಯಶೀಲ ಶೆಟ್ಟಿ ಘಟಪ್ರಭಾ ಹಾಗೂ ಅವರ ಕುಟುಂಬಿಕರು ಸೇವಾರೂಪದಲ್ಲಿ ನಿರ್ಮಿಸಿದ ಶಿಲಾಮಯ ನೂತನ ರಾಜಗೋಪುರದ ಸಮರ್ಪಣಾ ಕಾರ್ಯಕ್ರಮದ ಜತೆಯಲ್ಲಿ ಕ್ಷೇತ್ರದ ಭಕ್ತರ ಸಹಕಾರದಿಂದ ನಿರ್ಮಿಸಲಾದ ನೂತನ ಹೊರ ಹೆಬ್ಬಾಗಿಲನ್ನು ದೇವರಿಗೆ ಸಮರ್ಪಣೆ ಮಾಡಲಾಗುತ್ತದೆ. ಇದರೊಂದಿಗೆ ನೂತನ ಧ್ವಜಸ್ತಂಭ ಪ್ರತಿಷ್ಠೆ, ಮಹಾಬಲಿ ಪೀಠ, ಕ್ಷೇತ್ರಪಾಲ, ಸ್ವರ್ಣ ಶಿಖರ ಪ್ರತಿಷ್ಠೆ, ಯಾಗ ಶಾಲಾ ಹಾಗೂ ಭೋಜನಾ ಶಾಲೆಯ ಉದ್ಘಾಟನೆಗಳು ನಡೆಯಲಿದೆ.

ಈ ಬಗ್ಗೆ ಆದಿತ್ಯವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಂದು ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿ ಗೌರವಾಧ್ಯಕ್ಷ ಹೆಚ್.ಜಯಶೀಲ ಶೆಟ್ಟಿ ಘಟಪ್ರಭಾ ಅವರು, ಇದೇ ಮಾ.23 ರಂದು ಹೊರೆ ಕಾಣಿಕೆ ಸಮರ್ಪಣೆ ನಡೆಯಲಿದೆ. ಮಾ.24 ರಂದು ಅರಿರುದ್ರ ಮಹಾಯಾಗದ ಪ್ರಧಾನ ಸಂಕಲ್ಪ, ರುದ್ರ ಪಠಣ ಆರಂಭ. ಮಾ.25 ರಂದು ಬೆಳಿಗ್ಗೆ ಧ್ವಜ ಪ್ರತಿಷ್ಠೆ, ಮಹಾಬಲಿ ಪೀಠ, ಕ್ಷೇತ್ರಪಾಲ, ಸ್ವರ್ಣ ಶಿಖರ ಪ್ರತಿಷ್ಠೆ, ಕಲಾಹೋಮ ಮಹಾಪೂಜೆ, ಸಂಜೆ ರಂಗ ಪೂಜೆ, 108 ಕಲಶ ಸ್ಥಾಪನೆ, ಸಂಜೆ 7.30 ರಿಂದ ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಮಂಗಳೂರು ತಂಡದವರಿಂದ ‘ಕೊಲ್ಲೂರು ಶ್ರೀ ಮೂಕಾಂಬಿಕಾ ಒಂದು ನೃತ್ಯ ಗಾಥೆ ಹಾಗೂ ಇತರ ನೃತ್ಯ ಕಾರ್ಯಕ್ರಮಗಳು ನಡೆಯಲಿದೆ ಎಂದರು.

ಮಾ.26 ರಂದು ಗುರುವಾರ ಬೆಳಿಗ್ಗೆ 11.32 ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ನೂತನ ಮಹಾರಾಜಗೋಪುರವನ್ನು ಲೋಕಾರ್ಪಣೆ ಮಾಡಲಿದ್ದಾರೆ. ರಾಜ್ಯ ಮುಜರಾಯಿ ಸಚಿವ ಆರ್.ರಾಮಲಿಂಗ ರೆಡ್ಡಿ ಅವರು ನೂತನ ಹೆಬ್ಬಾಗಿಲು ಸಮರ್ಪಣೆ ಮಾಡಲಿದ್ದಾರೆ. ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಳರ್ ದೇವಳದ ಧ್ವಜಸ್ತಂಭ ಉದ್ಘಾಟನೆ ಮಾಡಲಿದ್ದಾರೆ. ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳೆ ಅವರು ಯಾಗ ಶಾಲೆ ಸಮರ್ಪಣೆ ಮಾಡಲಿದ್ದಾರೆ. ನಂತರ ನಡೆಯುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಶಾಸಕ ಗುರುರಾಜ್ ಗಂಟಿಹೊಳೆ ವಹಿಸಲಿದ್ದಾರೆ. ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕರುಗಳಾದ ಕೆ.ಗೋಪಾಲ ಪೂಜಾರಿ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಉದ್ಯಮಿ ಕಿಶೋರಕುಮಾರ ಹೆಗ್ಡೆ ಅವರುಗಳು ಭಾಗವಹಿಸಲಿದ್ದಾರೆ. ಸಂಜೆ 7ಕ್ಕೆ ರಾಜ್ಯ ಪ್ರಶಸ್ತಿ ಪುರಸ್ಕೃತ ಮಂಗಳೂರು ಕುಳಾಯಿಯ ಕಲಾ ಕುಂಭ ನಾಟಕ ತಂಡದವರಿಂದ ಭಕ್ತಿ ಪ್ರಧಾನ ಕನ್ನಡ ನಾಟಕ ‘ಪರಮಾತ್ಮ ಪಂಜುರ್ಲಿ’ ಪ್ರದರ್ಶನ ನಡೆಯಲಿದೆ ಎಂದರು.

ಮಾ.27 ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಧಾರ್ಮಿಕ ಸಭೆಯಲ್ಲಿ ಘಟಪ್ರಭಾ ಗುಬ್ಬಲಗುಡ್ಡ ಕೆಂಪಯ್ಯ ಸ್ವಾಮಿ ಮಠದ ಶ್ರೀ ಮ.ನಿ.ಪ್ರ.ಸ್ವ. ಡಾ.ಮಲ್ಲಿಕಾರ್ಜುನ ಮಹಾಸ್ವಾಮಿಗಳು ಆಶೀರ್ವಚನ ನೀಡಲಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಶಾಸಕ ಗುರುರಾಜ್ ಗಂಟಿಹೊಳ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವರು, ಶಾಸಕರಾದ ವಿ.ಸುನೀಲ್ ಕುಮಾರ, ಶಾಸಕರಾದ ಎ.ಕಿರಣ್ ಕುಮಾರ ಕೊಡ್ಗಿ, ಮಾಜಿ ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿ, ಗಣ್ಯರಾದ ಆನಂದ ಸಿ ಕುಂದರ್, ಗುರುರಾಜ್ ಭಟ್, ಧರ್ಮರಾಜ್ ಜೈನ್, ಉದ್ಯಮಿ ಕುಶಲ್ ಶೆಟ್ಟಿ ಹಾಗೂ ಕಾಲ್ಲೋಡು ಶ್ರೀ ಮಹಾಲಸ ಮಾರಿಕಾಂಬ ದೇವಸ್ಥಾನದ ಅರ್ಚಕ ರಾಮಯ್ಯ ಉಪಸ್ಥಿತರಿರಲಿದ್ದಾರೆ. ಧಾರ್ಮಿಕ ಕ್ಷೇತ್ರದ ಪ್ರಮುಖರಾದ ಕಟ್ಟೆ ಶಂಕರ ಭಟ್ ನವೀಲುಗೋಣ ಹಾಗೂ ವಾಸ್ತುತಜ್ಞ ಸುಬ್ರಮಣ್ಯ ಭಟ್ ಗುಂಡಿಬೈಲು ಧಾರ್ಮಿಕ ಪ್ರವಚನ ನೀಡಲಿದ್ದಾರೆ. ರಾತ್ರಿ 7 ರಿಂದ ಸನ್ಮಾನ ಕಾರ್ಯಕ್ರಮ. 8 ಕ್ಕೆ ಶ್ರೀ ಕ್ಷೇತ್ರ ಸಾಲಿಗ್ರಾಮ ಯಕ್ಷಗಾನ ಮೇಳದವರಿಂದ ನಂದೀಶ್ ಶೆಟ್ಟಿ ಬಿಲ್ಲಾಡಿ ಅವರ ರಚನೆಯ ‘ಗುಡೇ ಮಹಾಲಿಂಗೇಶ್ವರ ಮಹಾತ್ಮೆ’ ನೂತನ ಯಕ್ಷಗಾನ ಪ್ರಸಂಗದ ಪ್ರದರ್ಶನ ನಡೆಯಲಿದೆ ಎಂದರು.

ಕಾರ್ಯಕ್ರಮಗಳು ಸಾಂಗವಾಗಿ ನಡೆಯಬೇಕು ಎನ್ನುವ ಉದ್ದೇಶದಿಂದ ಊರ ಪ್ರಮುಖರನ್ನು ಸೇರಿಸಿಕೊಂಡು ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅರ್ಚಕರ ಮಾರ್ಗದರ್ಶನದಲ್ಲಿ ಕಾರ್ಯಕ್ರಮದ ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಾಲ್ಕು ದಿನಗಳ ಕಾಲ ನಡೆಯುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಊರ ಹಾಗೂ ಪರವೂರ ಸಾವಿರಾರು ಭಕ್ತಧಿಗಳು ಸೇರುವ ನಿರೀಕ್ಷೆ ಇದ್ದು, ಕಾರ್ಯಕ್ರಮಕ್ಕಾಗಿ ಬರುವ ಎಲ್ಲರಿಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಆಡಳಿತ ಸಮಿತಿ ಅಧ್ಯಕ್ಷ ಪದ್ಮನಾಭ ಮೇರ್ಟ್, ಖಜಾಂಚಿ ಹೆಚ್.ವಿಜಯ್ ಶೆಟ್ಟಿ ಕಾಲ್ತೋಡು, ಅರ್ಚಕ ಮಂಜುನಾಥ ಅಡಿಗ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!