spot_img
Tuesday, March 24, 2026
spot_img

ಮಾರಣಕಟ್ಟೆ: ಯಕ್ಷಗಾನ ಕಲಾವಿದರಿಗೆ ಸನ್ಮಾನ

ಮಾರಣಕಟ್ಟೆ: ಮಾರಣಕಟ್ಟೆ ದೇವಸ್ಥಾನದ ಶಾನುಭಾಗರ ಮನೆಯ ಕೆ.ನಾರಾಯಣ ಶೆಟ್ಟಿ ಅವರ ವರ್ಷಾವಧಿ ನಡೆಯುವ ಮಾರಣಕಟ್ಟೆ ಮೇಳದ ಯಕ್ಷಗಾನ ಬಯಲಾಟದ ವೇದಿಕೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಐರ್‌ಬೈಲ್ ಆನಂದ ಶೆಟ್ಟಿ ಹಾಗೂ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಯಳಬೇರು ಶೇಖರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾರಣಕಟ್ಟೆ ದೇವಸ್ಥಾನದ ಆಡಳಿತ ಮೊಕ್ತೇಸರ ಸಿ.ಸದಾಶಿವ ಶೆಟ್ಟಿ, ಮಾಜಿ ಧರ್ಮದರ್ಶಿ ಚಿತ್ತೂರು ಮಂಜಯ್ಯ ಶೆಟ್ಟಿ, ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ, ಸೇವಾರ್ಥಿಗಳಾದ ಕೆ.ನಾರಾಯಣ ಶೆಟ್ಟಿ, ಡಾ.ಸಂತೋಷ್ ಶೆಟ್ಟಿ ಸಹೋದರರು, ಡಾ.ಅಶೋಕ್ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯರಾದ ಚಂದ್ರ ಶೆಟ್ಟಿ, ಕೆರೆಕೊಡ್ಲು ಭಾಸ್ಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಕಲಾವಿದರನ್ನು ಅಭಿನಂದಿಸಿ ಮಾತನಾಡಿದ ವಂಡಬಳ್ಳಿ ಜಯರಾಮ ಶೆಟ್ಟರು ಪ್ರತಿವರ್ಷ ಮಾರಣಕಟ್ಟೆ ಮೇಳದ ಕಲಾವಿದರಿಗೆ ಪ್ರಶಸ್ತಿ ಲಭಿಸಿಸುತ್ತಿದ್ದು, ಪ್ರಶಸ್ತಿ ಪುರಸ್ಕೃತ ಕಲಾವಿದರನ್ನು ಅಭಿನಂದಿಸುತ್ತಾ ಬಂದಿದ್ದೇವೆ. ಕಲಾವಿದರ ಕಲಾಸೇವೆಯನ್ನು ನಾವು ಪ್ರೋತ್ಸಾಹಿಸಬೇಕು, ಸಾಧಕ ಕಲಾವಿದರನ್ನು ಗೌರವಿಸುವ ಪರಿಪಾಠ ಬೆಳೆಸಿಕೊಳ್ಳಬೇಕು ಎಂದರು.

ಬಳಿಕ ‘ಗದಾಯುದ್ಧ’ ಯಕ್ಷಗಾನ ಬಯಲಾಟ ನಡೆಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!