spot_img
Wednesday, March 25, 2026
spot_img

ಶಂಕರನಾರಾಯಣ ಕಾಲೇಜಿನಲ್ಲಿ ಯುವ ನಿಧಿ ಯೋಜನೆ ಕುರಿತು ಮಾಹಿತಿ

ಶಂಕರನಾರಾಯಣ : ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ ಯುವ ನಿಧಿ ಯೋಜನೆ ಕುರಿತು ಒಂದು ದಿನದ ಮಾಹಿತಿ ಕಾರ್ಯಾಗಾರ ಹಾಗೂ ಕೌಶಲ್ಯ ಮತ್ತು ಉದ್ಯೋಗ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮವನ್ನು ಕುಂದಾಪುರ ತಾಲೂಕು ಗ್ಯಾರೆಂಟಿ ಸಮಿತಿಗಳ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವ ನಿಧಿ ಯೋಜನೆಯು ಪದವಿ/ಡಿಪ್ಲೋಮಾ ಪಡೆದ ನಂತರ 180 ದಿನಗಳವರೆಗೆ ಉದ್ಯೋಗವಿಲ್ಲದಿರುವ ಯುವಕರಿಗೆ ಪ್ರತೀ ತಿಂಗಳು ರೂ.3000 ಮತ್ತು ರೂ.೧೫೦೦ ನಿರುದ್ಯೋಗ ಭತ್ಯೆ ನೀಡುತ್ತದೆ ಎಂದು ತಿಳಿಸಿದರು. ಗ್ರಾಮೀಣ ವಿದ್ಯಾವಂತ ಯುವಜನರಿಗೆ ಈ ಯೋಜನೆ ಆಶಾಕಿರಣವಾಗಿದೆ ಎಂದರು.

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಧಿಕಾರಿ ಪೃಥ್ವಿರಾಜ್ ಅವರು ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ ಮತ್ತು ಅನರ್ಹತೆಗಳ ಕುರಿತು ಮಾಹಿತಿ ನೀಡಿದರು. ಶ್ರೀಮತಿ ಲಕ್ಷ್ಮಿ ಸುವರ್ಣ ಅವರು ಯೋಜನೆಯ ಮಹತ್ವವನ್ನು ವಿವರಿಸಿ, ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಂಡು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಅವರು ಸರ್ಕಾರದ ಜನಪರ ಯೋಜನೆಗಳು ಆರ್ಥಿಕವಾಗಿ ಹಿಂದುಳಿದವರಿಗೆ ಮತ್ತು ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಐಕ್ಯು‌ಎಸಿ ಸಹಸಂಚಾಲಕಿ ಡಾ. ನಳಿನಶ್ರೀ ಆರ್.ಎನ್. ಹಾಗೂ ಯಜ್ಞೇಶ್ ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕರಾದ ಮಾರ್ಕಂಡಯ್ಯ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!