spot_img
Thursday, March 26, 2026
spot_img

ವರಾಹಿ ಯೋಜನೆ: ಯಾರಿಗೂ ಅನ್ಯಾಯ ಆಗಲು ಬಿಡಲ್ಲ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕುಂದಾಪುರ: ವರಾಹಿ ಯೋಜನೆಗೆ ಸಂಬಂಧಪಟ್ಟಂತೆ ಈಗಾಗಲೇ ಎರಡು ಕಡೆಯ ರೈತರು ಮನವಿ ನೀಡಿದ್ದು, ಯಾರಿಗೂ ಅನ್ಯಾಯ ಆಗಬಾರದು ಎಂಬುದೇ ಜಿಲ್ಲಾಡಳಿತ ಹಾಗೂ ಸರ್ಕಾರದ ಆಶಯವಾಗಿದೆ. ಈಗಾಗಲೇ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತಾಪಿ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಕುಂದಾಪುರದ ಕೋಟೇಶ್ವರ ಸಮೀಪದ ಯುವ ಮೆರಿಡಿಯನ್ ಹೆಲಿಪ್ಯಾಡ್ ಬಳಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು,

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಮುಂಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರದಲ್ಲಿರುವ ಪಕ್ಷದ ಕಡೆಗೆ ಮತದಾರರ ಒಲವಿರುತ್ತದೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮನೆ ಮನೆಗೆ ತಲುಪಿವೆ. ಅಭಿವೃದ್ಧಿಯ ಜೊತೆಗೆ ಜನರ ಆದಾಯ ಕೂಡ ಜಾಸ್ತಿ ಆಗಿದೆ. ಅದರಲ್ಲೂ ಮಹಿಳಾ ಮತದಾರರು ಸಂತೋಷದಲ್ಲಿದ್ದಾರೆ ಎಂದರು.

ಎರಡು ಕ್ಷೇತ್ರಗಳಲ್ಲೂ ಗೆದ್ದೇ ಗೆಲ್ಲುತ್ತೇವೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಟಿಕೆಟ್ ಕೇಳುವ ಹಕ್ಕಿದೆ. ಗೆಲುವೊಂದೇ ನಮಗೆ ಮಾನದಂಡ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಲಾಗಿದೆ. ಇದು ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.

ಇನ್ನು ಬೈಂದೂರು ನೂತನ ಕೆ‌ಎಸ್‌ಆರ್‌ಟಿಸಿ ಬಸ್‌ನಿಲ್ದಾಣಕ್ಕೆ ಒಂದಷ್ಟು ಸರ್ಕಾರಿ ಬಸ್‌ಗಳು ಪ್ರವೇಶಿಸುವುದಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸಭೆ ಕರೆದು ಶೀಘ್ರವೇ ಸಮಸ್ಯೆ ಬಗೆ ಹರಿಸಲಾಗುವುದು ಎಂದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!