spot_img
Friday, March 27, 2026
spot_img

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಾರ್ಷಿಕೋತ್ಸವ: ಪ್ರತಿಭಾ ಪ್ರದರ್ಶನ

ಕುಂದಾಪುರ: ಮಾರ್ಚ್27ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಂದೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ವಾಸುದೇವ ಯಡಿಯಾಳ್ ಅವರು ಕಾಲೇಜಿನಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಉತ್ತಮ ತರಬೇತಿ ಶಿಬಿರವಾಗಿರುತ್ತದೆ. ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಭ್ರಮಿಸುವುದುರೊಂದಿಗೆ ಜೀವನದ ಪಾಠವನ್ನು ಕಲಿಯುತ್ತೇವೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ.ಶಾಂತರಾಮ ಪ್ರಭು ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್ ಶೆಣೈ ಮತ್ತು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ೧೯೭೩ನೇ ಬ್ಯಾಚ್ ನ ವೆಂಕಟೇಶ್ ಶೆಣೈ ಆಗಮಿಸಿದ್ದರು.

ಕಾಲೇಜಿನ ಆಂತರಿಕ ಗುಣಮಟ್ಟ ಮತ್ತು ಭರವಸೆ ಕೋಶದ ಸಂಯೋಜಕರಾದ ಪ್ರೊ ಸತ್ಯನಾರಾಯಣ ಸ್ವಾಗತಿಸಿದರು.
ರಸಾಯನ ಶಾಸ್ತ್ರದ ಮುಖ್ಯಸ್ಥೆ ಪ್ರೊ.ನಿಶಾ ಎಮ್. ವಂದಿಸಿದರು. ಉಪನ್ಯಾಸಕಿಯರಾದ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ಹರ್ಷಿತಾ ತೀರ್ಪುಗಾರರನ್ನು ಪರಿಚಯಿಸಿದರು. ಉಪನ್ಯಾಸಕ ರಾಮಚಂದ್ರ ಆಚಾರಿ ಅತಿಥಿಗಳನ್ನು ಪರಿಚಯಿಸಿದರು.

ಅಂತರ್ ತರಗತಿ ಪ್ರತಿಭಾ ಪ್ರದರ್ಶನದ ಪ್ರಥಮ ಸ್ಥಾನವನ್ನು ಕಲಾ ವಿಭಾಗ ದ್ವಿತೀಯ ಸ್ಥಾನವನ್ನು: ದ್ವಿತೀಯ ಮತ್ತು ತೃತೀಯ ಬಿ ಎಸ್.ಸಿ , ತೃತೀಯ ಸ್ಥಾನವನ್ನು ತೃತೀಯ ಬಿಕಾಮ್ ವಿದ್ಯಾರ್ಥಿಗಳ ತಂಡ ಪಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ವಹಿಸಿದ್ದರು.
ತೀರ್ಪುಗಾರರಾದ ಡಾ.ಗಣೇಶ್ ಗಂಗೊಳ್ಳಿ, ಅನುರಾಧ ಮಯ್ಯ, ಮತ್ತು ರಮ್ಯಾ ರಮಣಿ ರವಿ ಉಪಸ್ಥಿತರಿದ್ದರು.

ಲಲಿತಾ ಕಲಾ ಸಂಘದ ಸಂಚಾಲಕರಾದ ಶಶಾಂಕ್ ಪಟೇಲ್ ವಂದಿಸಿದರು. ಉಪನ್ಯಾಸಕ ದುರ್ಗಾಪ್ರಸಾದ್ ಮಯ್ಯ ಸ್ವಾಗತಿಸಿದರು. ಉಪನ್ಯಾಸಕಿ ಶೃತಿ ಕಾಶಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!