spot_img
Saturday, March 28, 2026
spot_img

ಜಲ ಜೀವನ್ ಮಿಷನ್ ಕಾಮಗಾರಿಗಳ ಕರ್ಮಕಾಂಡದ: ಶಾಸಕರುಗಳು ಮೌನ ಮುರಿಯಲಿ-ವಿಕಾಸ್ ಹೆಗ್ಡೆ

ಕುಂದಾಪುರ : ಕುಂದಾಪುರ ಹಾಗೂ ಬೈಂದೂರು ವಿಧಾನ ಸಭಾ ಕ್ಷೇತ್ರದ ಜಲ ಜೀವನ್ ಮಿಷನ್ ಕಾಮಗಾರಿಗಳಲ್ಲಿನ ಕಳಪೆ ಗುಣಮಟ್ಟದ ಪೈಪ್ ಗಳ ಬಳಕೆ, ನೀರಿನ ಮೂಲ ಇಲ್ಲದೇ ಇರುವುದು, ಮನಬಂದಂತೆ ರಸ್ತೆಗಳ ಇಕ್ಕೆಲಗಳನ್ನು ಅಗೆದು ಹಾಕುತ್ತಿರುವುದು, ಗುತ್ತಿಗೆದಾರರು ಹಾಗೂ ಇಲಾಖಾ ಅಭಿಯಂತರರುಗಳು ಶಾಮೀಲಾಗಿರುವ ಕುರಿತು ಕುಂದಾಪುರ ಹಾಗೂ ಬೈಂದೂರು ಶಾಸಕರುಗಳು ಇಲ್ಲಿಯ ತನಕ ಮೌನ ಮುರಿಯದೆ ಇರಲು ಕಾರಣವೇನು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪ್ರಶ್ನಿಸಿದ್ದಾರೆ.

ನೀರಿನ ಮೂಲಗಳನ್ನೇ ಗುರುತಿಸದೆ ಮನೆಗಳ ಮುಂಬಾಗ ನಳ್ಳಿ ಅಳವಡಿಸಿರುವುದು ಜನರನ್ನು ದಾರಿ ತಪ್ಪಿಸುವ ಕೆಲಸವಾಗಿದೆ, ಇದರ ಬಗ್ಗೆ ಧ್ವನಿ ಎತ್ತ ಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕರುಗಳು ಮೌನಕ್ಕೆ ಶರಣಾಗಿರುವುದು ಹಲವು ಅನುಮಾನ ಕಾರಣವಾಗಿದೆ. ಶಾಸಕರುಗಳು ಇನ್ನಾದರೂ ಮೌನ ಮುರಿದು ಹಗಲು ದರೋಡೆಯಾಗಿರುವ ಜೆ.ಜೆ.ಎಂ ಕಾಮಗಾರಿಗಳ ಕುರಿತು ಉನ್ನತ ಮಟ್ಟದ ತನಿಖೆಗೆ ಸರ್ಕಾರವನ್ನು ಒತ್ತಾಯಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!