spot_img
Saturday, March 28, 2026
spot_img

ಎಪ್ರಿಲ್ 2ರಂದು ಕುಂದಾಪುರದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ

ಕುಂದಾಪುರ: ಗ್ರಾಮೀಣಾಭಿವೃದ್ಧಿ ಸಚಿವಾಲಯ, ಭಾರತ ಸರ್ಕಾರ, ಕರ್ನಾಟಕ ಸರ್ಕಾರ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖ ಬೆಂಗಳೂರು, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕುಂದಾಪುರ, ಭಂಡಾರ್ಕಾಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ಇವರುಗಳ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ-2026 ಎಪ್ರಿಲ್ 2 ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಆಯೋಜಿಲಾಗಿದೆ ಎಂದು ಜಿ.ಪಂ.ಯೋಜನಾ ನಿರ್ದೇಶಕರಾದ ವಿಜಯ ಕುಮಾರ್ ಹೇಳಿದರು.

ಅವರು ಕುಂದಾಪುರದ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.

ಈ ಉದ್ಯೋಗ ಮೇಳದಲ್ಲಿ ವಿವಿಧ ಕಂಪನಿಗಳು ಭಾಗವಹಿಸುತ್ತಿದ್ದು ಎಸ್.ಎಸ್.ಎಲ್.ಸಿಗಿಂತ ಕಡಿಮೆ ವಿದ್ಯಾರ್ಹತೆ ಉಳ್ಳವರು ಕೂಡಾ ಭಾಗವಹಿಸಬಹುದಾಗಿದೆ. ಎಸ್.ಎಸ್.ಎಲ್.ಸಿ , ಪಿಯುಸಿ, ಐಟಿ‌ಐ, ಬಿ.ಎ, ಬಿ‌ಎಡ್, ಬಿಬಿ‌ಎ, ಬಿಕಾಂ, ಬಿಬಿ‌ಎಂ, ಬಿಸಿ‌ಎ, ಬಿ‌ಎಸ್ಸಿ, ಬಿ.ಇ. ಬಿಟೆಕ್ ಬಿ‌ಎಸ್ಸಿ, ಕೃಷಿ ಪದವಿ, ಎಂಎ, ಎಂ.ಎಸ್.ಡಬ್ಲ್ಯೂ, ಎಂ.ಸಿ.ಎ, ಎಂ.ಬಿ.ಎ, ಎಂಎಸ್ಸಿ, ಎಂಕಾಂ, ಎಂಟೆಕ್, ಎಂ.ಎಸ್ಸಿ ಎಗ್ರಿ ಮತ್ತಿತ್ತರ ವಿದ್ಯಾಭ್ಯಾಸ ಹೊಂದಿರುವ 18 ವರ್ಷ ಮೇಲ್ಪಟ್ಟ ಪುರುಷ, ಮಹಿಳಾ, ತೃತೀಯ ಲಿಂಗಿಗಳು, ವಿಶೇಷ ವರ್ಗದವರು ಹಾಗೂ ವಿಶೇಷಚೇತನ ಅಭ್ಯರ್ಥಿಗಳು ಹಾಜರಾಗಬಹುದು ಎಂದರು.

ಈ ಉದ್ಯೋಗ ಮೇಳದಲ್ಲಿ ಮಾಹಿತಿ ತಂತ್ರಜ್ಞಾನ, ಸೇವಾ ವಲಯ, ಆರೋಗ್ಯ ಸೇವೆ, ಕೃಷಿ ವಲಯ, ಕೈಗಾರಿಕಾ ವಲಯ, ಇತರೆ ಕಂಪೆನಿಗಳು ಆಗಮಿಸಲಿವೆ.100ಕ್ಕೂ ಅಧಿಕ ಪ್ರತಿಷ್ಠಿತ ಕಂಪೆನಿಗಳಿಂದ ನೇರ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು udupi.nic.in ವೆಬ್ ಸೈಟ್ ಭೇಟಿ ನೀಡಿ ‘ಉದ್ಯೋಗ ಮೇಳ -2026’ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅಥವಾ ಅಂದು 9.30ರ ಒಳಗೆ ಸ್ಥಳದಲ್ಲಿಯೇ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಭಾಗವಹಿಸುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವ ಸಂಸ್ಥೆಗಳಿಗೆ ಅನುಗುಣವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಸ್ ಪೋರ್ಟ್ ಗಾತ್ರದ ಪೋಟೋ, ಆಧಾರ್ ಕಾಡ್ ಮತ್ತು ಶೈಕ್ಷಣಿಕ ದಾಖಲಾತಿಗಳು, ಅನುಭವ ಪ್ರಮಾಣ ಪತ್ರಗಳ ನಕಲು ಪ್ರತಿಗಳನ್ನು ಮೂಲಪ್ರತಿಗಳನ ನು ಕಡ್ಡಾಯವಾಗಿ ತರಬೇಕು ಎಂದರು.

ಇಲ್ಲಿ ಸರಕಾರಿ ಉದ್ಯೋಗಕ್ಕೆ ಸಂದರ್ಶನ ನಡೆಯುತ್ತಿಲ್ಲ. ಖಾಸಗಿ ವಲಯದ ಕಂಪೆನಿಗಳು ಮಾತ್ರ ಭಾಗಹಿಸುತ್ತವೆ. ಉದ್ಯೋಗದ ಹುಡುಕಾಟದಲ್ಲಿರುವ ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಅನುಕೂಲವಾಗುತ್ತದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಹುಡುಕಾಟದಲ್ಲಿರುವವರು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಪತ್ರಿಕಾಗೋಷ್ಟಿಯಲ್ಲಿ ಕುಂದಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ ಸಿ.ಜಿ., ಸಂಜೀವಿನಿ ಯೋಜನೆಯ ಮೈತ್ರಿ ಭಟ್, ಭಂಡಾರ್ಕಾಸ್ ಕಾಲೇಜಿನ ಪ್ರತಿನಿಧಿ ಜ್ಯೋತಿ ಸಾಲಿಗ್ರಾಮ ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!