spot_img
Tuesday, March 31, 2026
spot_img

ವಂಡ್ಸೆ ಗ್ರಾಮ ಪಂಚಾಯಿತಿಗೆ ಆರೋಗ್ಯಕರ ಗ್ರಾಮ ಪಂಚಾಯತ್ ರಾಷ್ಟ್ರೀಯ ಪುರಸ್ಕಾರ

ಕುಂದಾಪುರ: ಕೇಂದ್ರ ಸರಕಾರದ ಪಂಚಾಯತ್ ರಾಜ್ ಮಂತ್ರಾಲಯದಿಂದ ಸುಸ್ಥಿರ ಅಭಿವೃದ್ಧಿ ಗುರಿಗಳು ಎನ್ನುವ ವಿಷಯದ ಮೇಲೆ 9 ವಿಭಾಗಗಳಲ್ಲಿ ನ್ಯಾಷನಲ್ ಪಂಚಾಯತ್ ಆವಾರ್ಡ್ ನೀಡುತ್ತಿದ್ದು, ಆರೋಗ್ಯಕರ ಗ್ರಾಮ ಪಂಚಾಯತ್ ವಿಭಾಗದಲ್ಲಿ ಕೇಂದ್ರ ಸರಕಾರದ ರಾಷ್ಟ್ರೀಯ ಪುರಸ್ಕಾರ ಲಭಿಸಿದೆ.

ಈ ದೇಶದಲ್ಲಿ ಒಟ್ಟು 2.68ಲಕ್ಷ ಗ್ರಾಮ ಪಂಚಾಯತ್‌ಗಳಿದ್ದು ಅಂತಿಮ 55ರ ಪಟ್ಟಿಯಲ್ಲಿ ವಂಡ್ಸೆ ಗ್ರಾಮ ಪಂಚಾಯತ್ ಅಂತಿಮ ಸುತ್ತಿಗೆ ಆಯ್ಕೆಯಾಗಿತ್ತು. ಈಗಾಗಲೇ ಘನತ್ಯಾಜ್ಯ ವಿಲೇವಾರಿ ಘಟಕದ ಮೂಲಕ ರಾಜ್ಯ, ದೇಶದ ಗಮನ ಸಳೆದಿರುವ ವಂಡ್ಸೆ ಗ್ರಾಮ ಪಂಚಾಯತ್ ರಾಜ್ಯದಲ್ಲಿ ಪ್ರಥಮ ಬಾರಿಗೆ ಸಮುದಾಯ ಉಪಶಮನ ಆರೈಕೆ ಕೇಂದ್ರವನ್ನು ನಿರಾಮಯ ಸೊಸೈಟಿಯ ಮೂಲಕ ಅನುಷ್ಟಾನ ಮಾಡುವುದರೊಂದಿಗೆ ರಾಜ್ಯದ ಗಮನ ಸೆಳೆದಿತ್ತು. ಇತ್ತೀಚೆಗೆ ಕೇಂದ್ರದ ಅಧ್ಯಯನ ತಂಡ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿತ್ತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!