spot_img
Thursday, April 2, 2026
spot_img

ಕಾರ್ಕಳ ಜ್ಞಾನಸುಧಾ : ಪ್ರೌಢಶಾಲೆ ಮತ್ತು ವಾಣಿಜ್ಯ ವಿಭಾಗದ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ :ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿನ ಸಮಾಜಮುಖಿ ಕಾರ್ಯಕ್ರಮದ ಒಂದು ಭಾಗವಾಗಿ ಹಲವಾರು ವರ್ಷಗಳಿಂದ ಕಾರ್ಕಳ ತಾಲೂಕಿನ ಬಡ ಅರ್ಹ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡಲಾಗುತ್ತಿದ್ದು, ಈ ಬಾರಿಯೂ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 6ರಿಂದ 10ನೇ ತರಗತಿಯವರೆಗೆ ಪ್ರತೀ ತರಗತಿಗೆ 5 ವಿದ್ಯಾರ್ಥಿಗಳಂತೆ ಉಚಿತ ಶಿಕ್ಷಣವನ್ನು ಮತ್ತು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ದಾಖಲಾತಿ ಬಯಸುವ ಹತ್ತನೇ ತರಗತಿಯಲ್ಲಿ ಶೇ 95ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಂಪೂರ್ಣ ಉಚಿತ ಶಿಕ್ಷಣ, ಶೇ90ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ, ಶೇ 85ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಕಾಲೇಜು ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಸಂಸ್ಥೆಯ ಕಛೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದು ಕೊಳ್ಳಬಹುದು ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಶಾಲಾ ಕಛೇರಿ : 8147454907 ಕಾಲೇಜು ಕಛೇರಿ : 8147454906, 7259500911

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!