spot_img
Thursday, April 2, 2026
spot_img

ಕುಂದಾಪುರದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉದ್ಘಾಟನೆ

ಕುಂದಾಪುರ: ಯುವ ಜನತೆಗೆ ಉದ್ಯೋಗವಕಾಶಗಳು ಸುಲಭವಾಗಿ ಸಿಗಬೇಕು ಎನ್ನುವ ಕಾರಣದಿಂದ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗಕಾಂಕ್ಷಿಗಳಿಗೆ ಯಾವುದೇ ಕಂಪೆನಿಯಲ್ಲಿ ತಮ್ಮ ಆಯ್ಕೆಯ ಉದ್ಯೋಗ ದೊರೆತರೂ ಶ್ರದ್ದೆ, ಬದ್ದತೆಯಿಂದ ಕಾರ್ಯನಿರ್ವಹಿಸಿ ಯಶಸು ಪಡೆದುಕೊಳ್ಳಬೇಕು ಎಂದು ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಗ್ರಾಮೀಣಾಭಿವೃದ್ಧಿ ಸಚಿವಾಲಯ, ಭಾರತ ಸರ್ಕಾರ, ಕರ್ನಾಟಕ ಸರ್ಕಾರ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖ ಬೆಂಗಳೂರು, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕುಂದಾಪುರ, ಭಂಡಾರ್ಕಾಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ಇವರುಗಳ ಸಹಭಾಗಿತ್ವದಲ್ಲಿ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಉದ್ಯೋಗ ಮೇಳ-೨೦೨೬ ವನ್ನು ಉದ್ಘಾಟಿಸಿ ಮಾತನಾಡಿದರು.

ಈ ಉದ್ಯೋಗ ಮೇಳವನ್ನು ಉದ್ದೇಶಿಸಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಮಾತನಾಡಿ, ಸುಮಾರು ೮೯ ಕಂಪನಿಗಳು ಆಗಮಿಸಿದ್ದು ಉದ್ಯೋಗಪೇಕ್ಷಿಗಳು ತಮ್ಮ ವಿದ್ಯಾರ್ಹತೆ, ಅನುಭವ, ಆಸಕ್ತಿಯ ಆಧಾರದಲ್ಲಿ ತಮ್ಮ ಆಯ್ಕೆಯ ಕಂಪೆನಿಯ ಸಂದರ್ಶನ ಎದುರಿಸಿ, ತಮ್ಮ ಆರ್ಹತೆ, ಕೌಶಲ್ಯಕ್ಕೆ ತಕ್ಕ ಉದ್ಯೋಗ ದೊರೆಯಲಿ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಭಂಡಾರ್ಕಾಸ್ ಕಾಲೇಜು ಆಡಳಿತ ಮಂಡಳಿ ಉಪಾಧ್ಯಕ್ಷ ಕೆ ಶಾಂತರಾಮ ಪ್ರಭು, ಆಡಳಿತ ಮಂಡಳಿಯ ಯು.ಎಸ್.ಶೆಣೈ, ಪ್ರಾಂಶುಪಾಲರಾದ ಶುಭಾಕರಾಚಾರಿ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಜಿ.ಎಂ ಗೊಂಡ, ಜಿಲ್ಲಾ ಪಂಚಾಯಿತಿ ಯೋಜನ ನಿರ್ದೇಶಕ ವಿಜಯ್ ಕುಮಾರ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕೆ ಜಿ.,ಬೈಂದೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಕೆ.ಜಿ. ರಾಮದಾಸ್, ತಾಲೂಕು ಸಂಜೀವಿನಿ ಒಕ್ಕೂಟ ಕುಂದಾಪುರ ಇದರ ಮೈತ್ರಿ ಭಟ್, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!