spot_img
Friday, April 3, 2026
spot_img

ಕ್ರಿಯೇಟಿವ್ ಕಾಲೇಜಿನಲ್ಲಿ ‘ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಮತ್ತು ಎರಡನೇ ಪೋಸ್ಟರ್ ಬಿಡುಗಡೆ

ಕಾರ್ಕಳ: ಕರ್ನಾಟಕದ ಸುಂದರ ಕರಾವಳಿ ಪ್ರದೇಶವಾದ ಕಾರ್ಕಳವು ಸಾಂಸ್ಕೃತಿಕ ವೈಭವ, ಪ್ರಕೃತಿ ಸೌಂದರ್ಯ ಮತ್ತು ಶಾಂತ ವಾತಾವರಣಕ್ಕೆ ಪ್ರಸಿದ್ಧಿ. ಇದೇ ಊರಲ್ಲಿ ರಹಸ್ಯ ಸಂಚು ಮತ್ತು ಸತ್ಯದ ಹುಡುಕಾಟದಿಂದ ತುಂಬಿರುವ ಒಂದು ವಿಭಿನ್ನ ಕಥೆ ಮೂಡಿಬರುತ್ತದೆ ಅದೇ ಡಿಟೆಕ್ಟಿವ್ ದಿವಾಕರ್ ಈ ತುಳು ಚಲನಚಿತ್ರದ ಟೀಸರ್ ಲಾಂಚ್ ಮತ್ತು ಎರಡನೇ ಪೋಸ್ಟರ್ ಬಿಡುಗಡೆ ಸಮಾರಂಭವು ಕ್ರಿಯೇಟಿವ್ ಕಾಲೇಜು ಕಾರ್ಕಳದಲ್ಲಿ ಮಾ.೨೮ರಂದು ನೆರವೇರಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ.ರವೀಂದ್ರ ಶೆಟ್ಟಿ ಬಜಗೋಳಿಯವರು ನಮ್ಮ ನೆಲದ ಕಥೆಯನ್ನು ಹೇಳುವ ಈ ಚಲನಚಿತ್ರವು ಮುಂದಿನ ತಲೆಮಾರಿಗೆ ಒಂದು ಉತ್ತಮ ಸಂದೇಶವನ್ನು ನೀಡಲಿದೆ ಎಂದು ತಿಳಿಸುತ್ತಾ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಈ ಚಲನಚಿತ್ರದ ಸಹ ನಿರ್ಮಾಪಕರಾದ ವಿಭಾ ಪ್ರೊಡಕ್ಷನ್ ಅಶ್ವತ್ ಎಸ್.ಎಲ್ ಈ ಚಲನಚಿತ್ರವು ಒಂದು ಹೊಸ ಕಥಾಹಂದರವನಿಟ್ಟುಕೊಂಡು ನಿರ್ಮಾಣವಾಗಿದ್ದು ಕಾರ್ಕಳದ ಗತಿಸಿ ಹೋದ ಘಟನೆಗಳನ್ನು ಮತ್ತೆ ನೆನಪಿಸುವ, ರಹಸ್ಯಗಳನ್ನು ಅನಾವರಣಗೊಳಿಸುವ ಈ ಕಥೆ ಪ್ರೇಕ್ಷಕರಿಗೆ ಥ್ರಿಲ್ಲಿಂಗ್ ಅನುಭವ ನೀಡಲಿದೆ ಎಂದು ತಿಳಿಸುತ್ತಾ ಶುಭ ಹಾರೈಸಿದರು.

ವೇದಿಕೆಯಲ್ಲಿ ರವೀಂದ್ರ ಶೆಟ್ಟಿ ಬಜಗೋಳಿ, ಕ್ರಿಯೇಟಿವ್ ಸಂಸ್ಥೆಯ ಸಹಸಂಸ್ಥಾಪಕರಾದ ಅಶ್ವತ್ ಎಸ್ .ಎಲ್., ಅಮೃತ್ ಯು .ರೈ ಎನ್.ಪಿ . ಮೀಡಿಯಾದ ಮುಖ್ಯಸ್ಥರಾದ ವಾಸುದೇವ ಭಟ್, ಸಂದೀಪ್ ಎನ್, ಅವಿನಾಶ್ ಶೆಟ್ಟಿ (ಅಮ್ಮ ಚಾರಿಟೇಬಲ್ ಟ್ರಸ್ಟ್), ರಮಾನಂದ (ನಿರ್ದೇಶಕರು) ಡಾ.ಸಂತೋಷ್ ಕುಮಾರ್ ಶೆಟ್ಟಿ, ಸುನೀಲ್ ಕಡ್ತಲ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಜೀವಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಲೋಹಿತ್ ನಡೆಸಿಕೊಟ್ಟರು.

ಈ ಚಿತ್ರದ ನಿರ್ಮಾಪಕರು ಅಮೃತ್ ಯು. ರೈ. ಮತ್ತು ಸುನೀಲ್ ಶೆಟ್ಟಿ, ಸಹ ನಿರ್ಮಾಣ : ವಿಭಾ ಪ್ರೊಡಕ್ಷನ್, ಕಥೆ ಮತ್ತು ನಿರ್ದೇಶನ : ಸುನೀಲ್ ಕಡ್ತಲ, ಸಹಾಯಕ ನಿರ್ದೇಶಕರು: ವಿನೀಷ ಪೂಜಾರಿ, ಸಾಯಿನಾಥ್ ಪೆರ್ಡೂರು, ಛಾಯಾಗ್ರಹಣ : ಸಂತೋಷ್ ಕುಲಾಲ್, ಸಂಗೀತ : ಕಾರ್ತಿಕ್ ಮುಲ್ಕಿ, ಪ್ರವೀಣ್, ಸಂಕಲನ : ಗಗನ್ ಡಿ, ಪ್ರವೀಣ್ ಜಾರ್ಕಳ, ಪ್ರಜ್ವಲಿ ಸುವರ್ಣ, ವಸ್ತ್ರಲಂಕಾರ : ದರ್ಶಿತ್ ಭಂಡಾರಿ, ಪಬ್ಲಿಸಿಟಿ ಡಿಸೈನ್ : ಇನ್ಸ್ಪೈರ್ ಕ್ರಿಯೇಶನ್.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!