spot_img
Friday, April 3, 2026
spot_img

ವಿಶ್ವ ವಿನಾಯಕ ಸಿಬಿಎಸ್‌ಇ ಸ್ಕೂಲ್: ಗ್ರಾಜ್ಯುಯೇಶನ್ ಡೇ

ತೆಕ್ಕಟ್ಟೆ: ವಿಶ್ವ ವಿನಾಯಕ ಸಿ.ಬಿ.ಎಸ್‌ಇ ಸ್ಕೂಲ್ ತೆಕ್ಕಟ್ಟೆ ಇಲ್ಲಿನ ಯು.ಕೆ.ಜಿ. ಮಕ್ಕಳ ಗ್ರಾಜ್ಯುಯೇಶನ್ ಡೇ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅತಿಥಿಗಳಾಗಿ ಆಗಮಿಸಿದ ವರ್ಷಿಣಿ ಪೈಯವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಕ್ಕಳ ಬಾಲ್ಯದಲ್ಲಿ ಹೆತ್ತವರು ಬಹಳಷ್ಟು ಮುತುವರ್ಜಿ ವಹಿಸಿ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಪೂರಕವಾಗಬೇಕು ಎಂದು ತಿಳಿಸಿದರು. ಮಕ್ಕಳ ಪ್ರಾರಂಭಿಕ ಬೆಳವಣಿಗೆ ಹಾಗೂ ಕಲಿಕೆಯಲ್ಲಿ ಹೆತ್ತವರ ಪಾತ್ರ ಮಹತ್ತರವಾಗಿರುತ್ತದೆ. ಮಕ್ಕಳ ಸೂಕ್ಷ್ಮ ಮನಸ್ಸಿನ ಬೆಳವಣಿಗೆಗೆ ಉತ್ತಮ ವಾತಾವರಣ ಕಲ್ಪಿಸಿ ಕೊಡುವುದು ಪೋಷಕರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಪ್ರಾಂಶುಪಾಲ ನಿತಿನ್ ಡಿ’ ಆಲ್ಮೇಡಾ ಪ್ರಾಸ್ತಾವಿಕ ಮಾತುಗಳನ್ನಾಡಿ ಶಾಲಾ ಶೈಕ್ಷಣಿಕ ಚಟುವಟಿಕೆಗಳ ಕುರಿತು ವಿವರಿಸಿದರು. ಪೋಷಕರು ಮಕ್ಕಳೊಂದಿಗೆ ಸಮಯವನ್ನು ವ್ಯಯಿಸಿ ಅವರ ಸಂತೋಷದಲ್ಲಿ ಭಾಗವಹಿಸಿ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.

ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಪದವಿ ಸ್ವೀಕರಿಸಿದ ವಿದ್ಯಾರ್ಥಿಗಳಿಗೆ ಶುಭ ಕೋರಿ ಪೋಷಕರ ಸಹಕಾರವನ್ನು ಸ್ಮರಿಸಿದರು

ಕಾರ್ಯಕ್ರಮದಲ್ಲಿ, ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಶಾಲಾ ಸಿಬಂದಿಯವರು ಉಪಸ್ಥಿತರಿದ್ದರು. ಸೆಲ್ಫಿ ಕಾರ್ನರ್ ಹಾಗೂ ಎಲ್.ಕೆ.ಜಿ, ಯು.ಕೆ.ಜಿ ವಿದ್ಯಾರ್ಥಿಗಳು ತಯಾರಿಸಿದ ವಿವಿಧ ಮಾದರಿಗಳ ವಸ್ತು ಪ್ರದರ್ಶನ ವಿಶೇಷ ಆಕರ್ಷಣೆಯಾಗಿತ್ತು. ಶಿಕ್ಷಕಿಯರಾದ ವಿಲಾಸಿನಿ ಶೆಟ್ಟಿ ವಂದಿಸಿದರು, ಹಾಗೂ ಅಕ್ಷಯ ಶೆಟ್ಟಿ ಸ್ವಾಗತಿಸಿ, ಪ್ರೇಮ ರಾವ್‌ರವರು ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!