spot_img
Saturday, April 4, 2026
spot_img

ಎ.8ಕ್ಕೆ ರೇಡಿಯೋ ಕುಂದಾಪ್ರ ವಾರ್ಷಿಕೋತ್ಸವ: “ಹೌಂದರಾಯ್ನ ವಾಲ್ಗವಾ”

ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನ ರೇಡಿಯೋ ಕುಂದಾಪ್ರ 89.6ಎಫ್.ಎಮ್ ಸಮುದಾಯ ಬಾನುಲಿ ಕೇಂದ್ರದ ವಾರ್ಷಿಕೋತ್ಸವದ ಅಂಗವಾಗಿ “ಹೌಂದರಾಯ್ನ ವಾಲ್ಗವಾ” ಹೆಸರಲ್ಲಿ ಕಾರ್ಯಕ್ರಮ ಎಪ್ರಿಲ್ 8 ಬುಧವಾರ ನಡೆಯಲಿದೆ.

ಕಾಲೇಜಿನ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಮಾರಂಭ ಉದ್ಘಾಟಿಸಲಿದ್ದಾರೆ. ಶಾಸಕ ಕಿರಣ್ ಕುಮಾರ್ ಕೊಡ್ಗಿ ಕಲಾವಿದರನ್ನು ಗೌರವಿಸಲಿದ್ದಾರೆ. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. “ಹೌಂದರಾಯ್ನ ವಾಲ್ಗವಾ” ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷ ಕೆ.ಶಾಂತಾರಾಮ್ ಪ್ರಭು ಅಧ್ಯಕ್ಷತೆ ವಹಿಸಲಿದ್ದು , ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್.ಟಿ.ಸೋನ್ಸ್ ಅಭಿನಂದನಾ ಭಾಷಣ ಮಾಡಲಿದ್ದಾರೆ. ಹಿರಿಯ ವಿದ್ಯುತ್ ಗುತ್ತಿಗೆದಾರ ಕೆ.ಆರ್.ನಾಯ್ಕ, ಕನ್ನಡ ಸಾಹಿತ್ಯ ಪರಿಷತ್ತಿನ ಕುಂದಾಪುರ ತಾಲೂಕಿನ ಅಧ್ಯಕ್ಷ ಡಾ. ಉಮೇಶ್ ಪುತ್ರನ್, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಯು.ಎಸ್.ಶೆಣೈ ಮುಖ್ಯ ಅಭ್ಯಾಗತರಾಗಿ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಮೀನುಗಾರರ ಮಾತ್ಕತಿ, ಕುಂದಾಪ್ರ ಕನ್ನಡ ಹರಿಕತಿ, ತಾಳಮದ್ದಳೆ, ಧಿಮ್ಸಾಲ್, ಕೋಲು ಹೊಯ್ಯುವ ಹಾಡು ಪ್ರದರ್ಶನಗೊಳ್ಳಲಿವೆ. ರೇಡಿಯೋ ಕುಂದಾಪ್ರದ ಕಾರ್ಯಕ್ರಮ ನಿರ್ವಹಕಿ ಕಾರ್ಯಕ್ರಮ ನಿರ್ವಹಿಸದ್ದಾರೆ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರಾಚಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!