spot_img
Monday, April 6, 2026
spot_img

ಬಸ್ರೂರು: ಉಚಿತ ಆರೋಗ್ಯ ತಪಾಸಣಾ ಶಿಬಿರ

ಕುಂದಾಪರ : ಆರೋಗ್ಯ ಉತ್ತಮವಾಗಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು. ಆದ್ದರಿಂದ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು ಮತ್ತು ಜಾಗೃತೆ ವಹಿಸಬೇಕು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಂಡು ನೆಮ್ಮದಿಯಿಂದ ಜೀವನ ನಡೆಸಬೇಕು. ಆರೋಗ್ಯ ತಪಾಸಣೆ ಶಿಬಿರಗಳ ಸದುಪಯೋಗ ಪಡೆದುಕೊಂಡು ನಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಮ್ಯಾನೇಜಿಂಗ್ ಟ್ರಸ್ಟಿ ಅಧ್ಯಕ್ಷ ಟಿ.ನಾರಾಯಣ ಪೈ ಹೇಳಿದರು.
ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನ ಟ್ರಸ್ಟ್ ಹಾಗೂ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಬಸ್ರೂರು ಇವರ ಸಂಯುಕ್ತ ಆಶ್ರಯದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ಸಹಯೋಗದೊಂದಿಗೆ ಬಸ್ರೂರು ಮಂಡಿಕೇರಿ ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಬಸ್ರೂರು ಇದರ ಅಧ್ಯಕ್ಷ ಬಿ.ಎನ್. ಪ್ರಭು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯರಾದ ಡಾ. ಸತೀಶ ಪ್ರಭು, ಡಾ.ಸಾಕೇತ್ ರಾವ್, ಡಾ.ಸಾಯಿ ಆಶಿಶ್, ಡಾ.ಶ್ವೇತಾ, ಡಾ.ಸಂಜನಾ, ಡಾ. ಅಥರ್ವ ಮಹೇಶ್, ದೇವಸ್ಥಾನದ ಧರ್ಮದರ್ಶಿ ಮಂಡಳಿ ಸದಸ್ಯರು, ಬಸ್ರೂರು ಜಿಎಸ್‌ಬಿ ಸಮಾಜದ ಪದಾಧಿಕಾರಿಗಳು, ಸದಸ್ಯರು, ಮೊದಲಾದವರು ಉಪಸ್ಥಿತರಿದ್ದರು.
ಭಾವನಾ ಕಾಮತ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಶಿಬಿರದಲ್ಲಿ ಚರ್ಮರೋಗ, ಮೂಳೆ ಸಂಬಂಧಿತ ತಪಾಸಣೆಗಳನ್ನು, ರಕ್ತದಲ್ಲಿನ ಸಕ್ಕರೆ ಅಂಶ ಪರೀಕ್ಷೆ, ಮಧುಮೇಹ ಪಾದ ಪರೀಕ್ಷೆ, ಶರೀರ ಸಂಯೋಜನೆ ವಿಶ್ಲೇಷಣೆ ಹಾಗೂ ಇ.ಸಿ.ಜಿ. ಸೇರಿದಂತೆ ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!