spot_img
Tuesday, April 7, 2026
spot_img

ಗಾಯಕ, ಆಕಾಶವಾಣಿ ಕಲಾವಿದ ಗಣೇಶ ಗಂಗೊಳ್ಳಿ ಇನ್ನಿಲ್ಲ

ಕುಂದಾಪುರ: ಕರಾವಳಿಯ ಪ್ರಸಿದ್ಧ ಗಾಯಕ, ಆಕಾಶವಾಣಿ ಕಲಾವಿದ ಡಾ.ಗಣೇಶ ಗಂಗೊಳ್ಳಿ ಎ.7 ಮಂಗಳವಾರ ಸಾಲಿಗ್ರಾಮದಲ್ಲಿ ನಿಧನರಾದರು.

ತನ್ನ ಸ್ಕೂಟರ್ ನಲ್ಲಿ ಉಡುಪಿಗೆ ಹೊರಟಿದ್ದ ಅವರು ಸಾಲಿಗ್ರಾಮದಲ್ಲಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿ ತೀವ್ರ ಅಸ್ವಸ್ಥಗೊಂಡ ಅವರನ್ನು ತಕ್ಷಣ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ನಿಧನರಾದರು.

ಮೂರು ದಶಕಗಳಿಗೂ ಹೆಚ್ಚು ಕಾಲ ಕುಂದಾಪುರ ಭಾಗದಲ್ಲಿ ಪ್ರಸಿದ್ಧ ಗಾಯಕರಾಗಿ ಹೆಸರು ಗಳಿಸಿದ್ದರು. ಮಂಗಳೂರು ಆಕಾಶವಾಣಿ ಕಲಾವಿದರಾಗಿ ಪರಿಚಿತರಾದ ಅವರು ತೊಂಭತ್ತರ ದಶಕದಿಂದಲೇ ಗಾಯಕರಾಗಿ ಬೇಡಿಕೆ ಗಳಿಸಿದ್ದರು. ಅಂದಿನ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ಸಂಗೀತ ಕಾರ್ಯಕ್ರಮ ನೀಡುತ್ತಾ ಬಂದಿದ್ದ ಅವರು ಜಾನಪದ ಗೀತೆಗಳ ಮೂಲಕವೇ ಪ್ರಸಿದ್ಧರಾಗಿದ್ದರು. ಇತ್ತೀಚೆಗಿನ ವರ್ಷಗಳಲ್ಲಿ ರೈತಗೀತೆಯ ಮೂಲಕ ಖ್ಯಾತಿ ಗಳಿಸಿದ್ದರು. ತನ್ನದೆಯಾದ ಸಂಗೀತ ಬಳಗವನ್ನು ರೂಪಿಸಿಕೊಂಡು ಕಾರ್ಯಕ್ರಮಗಳನ್ನು ನೀಡುತ್ತಿದ್ದರು. ಹಲವಾರು ಕಡೆಗಳಲ್ಲಿ ಸಂಗೀತ ಕಲಿಸುತ್ತಿದ್ದರು. ನೂರಾರು ಗಾಯಕರನ್ನು ಅವರು ಸೃಷ್ಟಿಸಿದ್ದರು.

ಉಡುಪಿ ಜಿಲ್ಲಾ ಜಾನಪದ ಪರಿಷತ್ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಕುಂದಾಪ್ರ ಕನ್ನಡದ ಹಾಡುಗಳನ್ನು ಬಹುತೇಕ ಎಲ್ಲ ವೇದಿಕೆಗಳಲ್ಲೂ ಹಾಡುತ್ತಾ ಗಮನ ಸಳೆಯುತ್ತಿದ್ದರು. ಇವರ ಪ್ರತಿಭೆಗೆ ಹಲವಾರು ಪ್ರಶಸ್ತಿಗಳು ಲಭಿಸಿದ್ದವು. ಮುಖ್ಯವಾಗಿ ಕರ್ನಾಟಕ ಯುವರತ್ನ ಪ್ರಶಸ್ತಿ, ಸ್ವಾಮಿ ವಿವೇಕಾನಂದ ಪ್ರಶಸ್ತಿ, ಬೇಂದ್ರೆ ನುಡಿಸಿರಿ ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿದ್ದವು.

ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!