spot_img
Wednesday, April 8, 2026
spot_img

ಅರೆಹೊಳೆಯಲ್ಲಿ ಎ.16ರಿಂದ ಎ.20 ತನಕ ಅರೆಹೊಳೆ ದಿಬ್ಬಣ: ರಂಗಶಾಲೆ ನೂತನ ಕಟ್ಟಡ ಲೋಕಾರ್ಪಣೆ: ನೃತ್ಯ, ನಾಟಕ, ಯಕ್ಷಗಾನ ಸಾಂಸ್ಕೃತಿಕ ವೈಭವ

ಬೈಂದೂರು: ಕಳೆದ ಹನ್ನೊಂದು ವರ್ಷಗಳಿಂದ ಮಂಗಳೂರನ್ನು ಕೇಂದ್ರ ಸ್ಥಾನವಾಗಿಸಿಕೊಂಡು ಶಿಕ್ಷಣ, ಕಲೆ, ಸಾಹಿತ್ಯ ಮತ್ತು ಸಂಸ್ಕøತಿ ಕ್ಷೇತ್ರಗಳಲ್ಲಿ ಚಟುವಟಿಕೆಯಲ್ಲಿರುವ ಅರೆಹೊಳೆ ಪ್ರತಿಷ್ಠಾನ, ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಅರೆಹೊಳೆಯಲ್ಲಿ, ಅರೆಹೊಳೆ ರೆಪರ್ಟರಿ ಮತ್ತು ಥಿಯೇಟರ್ ಸ್ಕೂಲ್ ಎನ್ನುವ ಹೆಸರಲ್ಲಿ ರಂಗತಂಡ ಹಾಗೂ ರಂಗಶಾಲೆಯನ್ನು ಆರಂಭಿಸಿದೆ. ಅರೆಹೊಳೆಯಂತಹ ಗ್ರಾಮೀಣ ಪ್ರದೇಶದಲ್ಲಿ ರಂಗಚಟುವಟಿಕೆ, ಶಿಕ್ಷಣ, ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬಂದಿದ್ದು, ಇದೇ ಎಪ್ರಿಲ್ 16ರಿಂದ ಎಪ್ರಿಲ್ 20ರ ತನಕ ‘ಅರೆಹೊಳೆ ದಿಬ್ಬಣ’ ಎನ್ನುವ ಕಾರ್ಯಕ್ರಮವನ್ನು ಆಯೋಜಿಸಿದೆ. ನಮ್ಮ ಬಹು ಮಹತ್ವಕಾಂಕ್ಷೆಯ ಅರೆಹೊಳೆ ರಂಗಶಾಲೆಯ ನೂತನ ಕಟ್ಟಡ ಲೋಕಾರ್ಪಣೆ ಹಾಗೂ ಸಾಂಸ್ಕೃತಿಕ ಆಡುಂಬೊಲ ನಡೆಯಲಿದೆ ಎಂದು ಅರೆಹೊಳೆ ಪ್ರತಿಷ್ಠಾನದ ಮುಖ್ಯಸ್ಥರಾದ ಅರೆಹೊಳೆ ಸದಾಶಿವ ರಾವ್ ತಿಳಿಸಿದರು.

ಅವರು ಬುಧವಾರ ಅರೆಹೊಳೆ ರೆಪರ್ಟರಿ ಮತ್ತು ಥಿಯೇಟರ್ ಸ್ಕೂಲ್‍ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.

ಅರೆಹೊಳೆ ರೆಪರ್ಟರಿ ಮತ್ತು ಥಿಯೇಟರ್ ಸ್ಕೂಲ್ ಅರೆಹೊಳೆಯಲ್ಲಿ ಪ್ರತಿದಿನ ಮಧ್ಯಾಹ್ನ 2.30ರಿಂದ ಕಾರ್ಯಕ್ರಮ ನಡೆಯಲಿದೆ. ಎ.16 ಗುರುವಾರ ಬೆಳಿಗ್ಗೆ 8 ಗಂಟೆಗೆ ಎ.ಎಸ್.ಕೆ ಫೌಂಡೇಶನ್ ಪ್ರಾಯೋಜಿತ ಐದು ದಿನಗಳ ರಂಗ ಶಿಬಿರ ‘ರಂಗಿನಾಟ’ವನ್ನು ಯಕ್ಷಗಾನ ಗುರುಗಳಾದ ಸುಜಯೀಂದ್ರ ಹಂದೆ ಸಾಲಿಗ್ರಾಮ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಮಹಾಗಣಪತಿ ವಾದ್ಯವೃಂದ ಆಕಳಬೈಲು ಇವರ ಪ್ರಸುತಿಯಲ್ಲಿ ಸ್ಯಾಕ್ಸೋಪೋನ್ ವಾದ್ಯಗೋಷ್ಠಿ ನಡೆಯಲಿದೆ. ಸಂಜೆ 5.30ಕ್ಕೆ ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರ ಪ್ರಸ್ತುತಿಯಲ್ಲಿ ಧರ್ಮಸ್ಥಳದ ಮಹಿಮೆಯನ್ನು ಸಾರುವ ‘ಧರ್ಮ ಸಂಸ್ಥಾಪನಾರ್ಥಾಯ’ ಎನ್ನುವ ನೃತ್ಯರೂಪಕದ ಪ್ರಥಮ ಪ್ರದರ್ಶನ ನಡೆಯಲಿದೆ. ರಾತ್ರಿ 8 ಕ್ಕೆ ಹನುಮಗಿರಿ ಮೇಳದವರಿಂದ ಯಕ್ಷಗಾನ ‘ಸಾಕೇತ ಸಾಮ್ರಾಜ್ಞಿ’ ಪ್ರದರ್ಶನಗೊಳ್ಳಲಿದೆ ಎಂದರು.

ಎ.17ರಂದು ಶುಕ್ರವಾರ ಮಧ್ಯಾಹ್ನ 2.30ಕ್ಕೆ ಯಕ್ಷಗಾನ ತಾಳಮದ್ದಳೆ ‘ಸುದರ್ಶನ ವಿಜಯ’ ನಡೆಯಲಿದೆ. ಯಕ್ಷ ನುಡಿಸಿರಿ ಬಳಗ ಸಿದ್ಧಾಪುರ ಪ್ರಸ್ತುತಿಯಲ್ಲಿ ತಾಳಮದ್ದಳೆ ನಡೆಯಲಿದ್ದು ಹಿಮ್ಮೇಳದಲ್ಲಿ ಪ್ರಸಾದ್ ಕುಮಾರ್ ಮೊಗೆಬೆಟ್ಟು, ರಾಘವೇಂದ್ರ ಹೆಗಡೆ, ಕುಮಾರ್ ಅಮೀನ್ ಕೊಕ್ಕರ್ಣೆ, ಅರ್ಥಧಾರಿಗಳಾಗಿ ಜಬ್ಬಾರ್ ಸಮೋ ಸಂಪಾಜೆ, ಸತೀಶ ಶೆಟ್ಟಿ ಮೂಡುಬಗೆ, ಪ್ರಸಾದ್ ಭಟ್ಕಳ, ಡಾ.ಜಗದೀಶ ಶೆಟ್ಟಿ ಸಿದ್ಧಾಪುರ, ಧನಂಜಯ ಚಾತ್ರ ಭಾಗವಹಿಸಲಿದ್ದಾರೆ. ಸಂಜೆ 7.30ಕ್ಕೆ ನಟನ ಪ್ರಸ್ತುತಿಯಲ್ಲಿ ನಾಟಕ ‘ಕಣಿವೆಯ ಹಾಡು’ ಪ್ರದರ್ಶನಗೊಳ್ಳಲಿದೆ ಎಂದರು.

ಎ.18ರಂದು ಮಧ್ಯಾಹ್ನ 2.30ಕ್ಕೆ ಅರೆಹೊಳೆ ನೃತ್ಯ ತರಗತಿಯ ವಿದ್ಯಾರ್ಥಿಗಳಿಂದ ‘ನೃತ್ಯ ವರ್ಷಾ’, ಗೀತಾ ಬೈಂದೂರು ನೇತೃತ್ವದ ಇನಿದನಿ ಮ್ಯೂಸಿಕಲ್ಸ್ ಬೈಂದೂರು ಇವರಿಂದ ‘ಹಾಡುತಾ ಆಡುತಾ’, ಸಂಜೆ 5ಕ್ಕೆ ಅರೆಹೊಳೆ ದಿಬ್ಬಣ ಪುರಸ್ಕಾರ ಪ್ರದಾನ ನಡೆಯಲಿದ್ದು, ಹಿರಿಯ ಸ್ಯಾಕ್ಸೋಪೋನ್ ವಾದಕ ಮಂಜು ದೇವಾಡಿಗ ಅಕಳಬೈಲು, ಹಿರಿಯ ಯಕ್ಷಗಾನ ಕಲಾವಿದ ಮಹಾಬಲೇಶ್ವರ ರೈ ಕಾಸರಗೋಡು, ಹಿರಿಯ ಸೂಲಗಿತ್ತಿ ತುಂಗ ದೇವಾಡಿಗ ಚಿಕ್ತಾಡಿ ಇವರಿಗೆ ‘ಅರೆಹೊಳೆ ದಿಬ್ಬಣ ಪುರಸ್ಕಾರ’ ಪ್ರದಾನ ಮಾಡಲಾಗುವುದು. ಧರ್ಮದರ್ಶಿ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಗುರುರಾಜ ಗಂಟಿಹೊಳೆ ಭಾಗವಹಿಸಲಿದ್ದಾರೆ.  ಸಂಜೆ 7.15ರಿಂದ ಅಯಣ ಡಾನ್ಸ್ ಕಂಪನಿ ಪ್ರಸ್ತುತಿಯಲ್ಲಿ ‘ಧ್ರುವ’ ನೃತ್ಯರೂಪಕ ಪ್ರದರ್ಶನಗೊಳ್ಳಲಿದೆ ಎಂದರು.

ಎ.19 ಆದಿತ್ಯವಾರ ಮಧ್ಯಾಹ್ನ 2.30ಕ್ಕೆ ಅರೆ ಶಾಸ್ತ್ರೀಯ ಸಮೂಹ ನೃತ್ಯ ಸ್ಪರ್ಧೆ ‘ನೂಪುರಂಗಳ್…’, ಸಂಜೆ 6.45ಕ್ಕೆ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಗಾನನೃತ್ಯ ಅಕಾಡೆಮಿ ಮಂಗಳೂರು ಇವರ ಪ್ರಸ್ತುತಿಯಲ್ಲಿ ‘ಜ್ವಾಲಾಮುಖಿ ಅಂಬೆ’ ಏಕವ್ಯಕ್ತಿ ಪ್ರದರ್ಶನ ನಡೆಯಲಿದೆ. ಎ.20 ಸೋಮವಾರ ಮಧ್ಯಾಹ್ನ 2.30ರಿಂದ ರಾಜ್ ಗುರು ಹೊಸಕೋಟೆ ಮತ್ತು ನಯನ ಸೂಡ ನೃತೃತ್ವದ ಅದಿಮೂಲ ತಂಡ ಹಾಗೂ ರಂಗಿನಾಟ ಶಿಬಿರಾರ್ಥಿಗಳಿಂದ ರಂಗಗೀತೆಗಳು, ಸಂಜೆ 7.30ಕ್ಕೆ ನೃತ್ಯ ನಿಕೇತನ ಕೊಡವೂರು ಇವರಿಂದ ನೃತ್ಯ ರೂಪಕ ನಾರಸಿಂಹ ಪ್ರದರ್ಶನಗೊಳ್ಳಲಿದೆ ಎಂದರು.

ಈ ಸಂದರ್ಭದಲ್ಲಿ ಆಮಂತ್ರಣ ಪತ್ರಿಕೆಯನ್ನು ಅರೆಹೊಳೆ ದೇವಸ್ಥಾನದ ಅರ್ಚಕರಾದ ರಾಘವೇಂದ್ರ ಕಾರಂತ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಚಿಕ್ತಾಡಿ ಗೆಳೆಯರ ಬಳಗದ ಅಧ್ಯಕ್ಷ ಉಮೇಶ ಮೊಗವೀರ, ನಂದಗೋಕುಲ ತಂಡದ ನೃತ್ಯ ನಿರ್ದೇಶಕಿ ಶ್ವೇತಾ ಅರೆಹೊಳೆ ಉಪಸ್ಥಿತರಿದ್ದರು. ಸಾಂಸ್ಕೃತಿಕ ಚಿಂತಕ ಉದಯ ಶೆಟ್ಟಿ ಪಡುಕೆರೆ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!