spot_img
Thursday, April 9, 2026
spot_img

ಬಿ. ಬಿ. ಹೆಗ್ಡೆ ಕಾಲೇಜು: ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಕುಂದಾಪುರ : ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವೃತ್ತಿ
ಮಾರ್ಗದರ್ಶನ ಮತ್ತು ತರಬೇತಿ ಘಟಕದ ಆಶ್ರಯದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ
ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಪದವಿಯ ನಂತರ ಉನ್ನತ ಶಿಕ್ಷಣದ
ಮಹತ್ವ ಮತ್ತು ಉದ್ಯೋಗ ಸಾಧ್ಯತೆಗಳ ಕುರಿತು ಉಪನ್ಯಾಸ ಮತ್ತು ಸಂವಾದ ನಡೆಸಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಎ.ಜೆ. ಇನ್ಸ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್, ಮಂಗಳೂರು
ಇಲ್ಲಿನ ವೃತ್ತಿ ಮಾರ್ಗದರ್ಶಕರಾದ  ಪ್ರಶಾಂತ ಶೆಟ್ಟಿ ಹಾಗೂ ಮ್ಯಾನೇಜ್ಮೆಂಟ್ ಸ್ಟಡೀಸ್ ವಿಭಾಗದ
ಪ್ರಾಧ್ಯಾಪಕಿ ರೋಶನ್ ಡಿ’ಕೋಸ್ಟಾ ಭಾಗವಹಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ.
ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವೃತ್ತಿ ಮಾರ್ಗದರ್ಶಕ ಮತ್ತು ತರಬೇತಿ ಘಟಕದ
ಸಂಯೋಜಕ ತಿಮ್ಮಪ್ಪ ಡಿ.ಎಸ್. ಸ್ವಾಗತಿಸಿ, ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!