spot_img
Friday, April 10, 2026
spot_img

ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜು- ಶೇಕಡಾ 92 ಫಲಿತಾಂಶ ಸಾಧನೆ

ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜು ಉಡುಪಿ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಸಂಸ್ಥೆಯಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿದೆ. ಹಿಂದುಳಿದ ಮತ್ತು ಬಡ ವಿದ್ಯಾರ್ಥಿಗಳಿಗೆ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಲ್ಲಿ ವಿವಿಧ ಸಂಯೋಜನೆಗಳ ವ್ಯಾಸಂಗಕ್ಕೆ ಅವಕಾಶ ಮಾಡಿಕೊಡುತ್ತಿದೆ. ಮಾರ್ಚ್ 2026 ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿ ಮತ್ತೊಮ್ಮೆ ತನ್ನ ಗುಣಮಟ್ಟವನ್ನು ಸಾಬೀತುಪಡಿಸಿದೆ. ಈ ಬಾರಿ ಒಟ್ಟು 596 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 548ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ 92 ಫಲಿತಾಂಶ ಬಂದಿರುತ್ತದೆ. 142 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ 295 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 80 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಕಲಾವಿಭಾಗದ ಆಂಜನೇಯ 556, ದೀಪ್ತಿ 550
ಡಿ ಅರವಿಂದಕುಮಾರ 536, ವಾಣಿಜ್ಯ ವಿಭಾಗದಲ್ಲಿ ಶರ್ಮಿಳ 590 ರಾಧಿಕಾ 587 ರಕ್ಷಣ್ ಆಚಾರ್ 582 ಹಾಗೂ ವಿಜ್ಞಾನ ವಿಭಾಗದಲ್ಲಿ ಸುಶ್ಮಿತ ಮತ್ತು ತುಳಸಿ ಮಂಜುನಾಥ್ ನಾಯಕ್ 586, ಶ್ರೇಯ 584 ಪೃಥ್ವಿ ಆರ್ 571 ಅಂಕ ಪಡೆದು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಸಾಧನೆ ಮಾಡಿದ ಎಲ್ಲ ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಸದಸ್ಯರು ಹಳೆಯ ವಿದ್ಯಾರ್ಥಿ ಸಂಘ ಪ್ರಾಂಶುಪಾಲರು ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!