spot_img
Monday, June 1, 2026
spot_img

ದ್ವಿತೀಯ ಪಿಯು ಫಲಿತಾಂಶ-ಜನತಾ ಪಿಯು ಕಾಲೇಜ್ ಹೆಮ್ಮಾಡಿ ರಾಜ್ಯಕ್ಕೆ ದ್ವಿತೀಯ Rank | ರಾಜ್ಯಕ್ಕೆ ದ್ವಿತೀಯ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ತಂದು ಕೊಟ್ಟ ರಶ್ಮಿ ಪೈ | 17ವಿದ್ಯಾರ್ಥಿಗಳು ರಾಜ್ಯಕ್ಕೆ ಟಾಪರ್

ಹೆಮ್ಮಾಡಿ : 2025-26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರ ಭಾಗದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು ಕೇವಲ 45% ನಿಂದ ಹಿಡಿದು 50%, 55%, 60% ಅಂಕ ಪಡೆದ ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿ ಕಾಲೇಜು ಪ್ರಾರಂಭದಿಂದ ಸತತ 4ನೇ ವರ್ಷವೂ ಉತ್ತಮ ಶೈಕ್ಷಣಿಕ ಸಾಧನೆ ಮಾಡಿದೆ . 17 ವಿದ್ಯಾರ್ಥಿಗಳು ಅತ್ಯಧಿಕ ಅಂಕಗಳಿಸಿ ರಾಜ್ಯ ಮಟ್ಟದಲ್ಲಿ ಗುರುತಿಸಿ ಕೊಂಡಿದ್ದಾರೆ.

ವಿಜ್ಞಾನ ವಿಭಾಗದಲ್ಲಿ – ರಶ್ಮಿ ಪೈ 598, ಶ್ರಾವ್ಯ ದೇವಾಡಿಗ 597,ಅಕ್ಷತಾ ವೀರಣ್ಣ 596,ಪ್ರಜ್ಞಾ ಎಸ್ ಪೂಜಾರಿ 594,ಇಂಚರಾ ಅಶೋಕ್ 594,ಮಾನ್ಯ 592,ಪ್ರಸಾದ್ ಪೂಜಾರಿ 591,ಸ್ಮೃತಿಕಾ 590,ಧನ್ಯ ಬಿಲ್ಲವ 590.

ವಾಣಿಜ್ಯ ವಿಭಾಗದಲ್ಲಿ -ಶಮ್ಯ ಶೆಟ್ಟಿ 597, ಪ್ರಥಮ ಕಾಂಚನ್ 596, ಸುಚಿತ್ರ 595,ಅನ್ವಿತಾ 594,ಸಾನಿಕಾ 593,ಹಿರನ್ಮಯ್ 592, ಕಲ್ಪಿತಾ 592,ಪ್ರೀತನ್ 591, ಅಂಕ ಗಳಿಸಿ ರಾಜ್ಯ ಮಟ್ಟದಲ್ಲೇ ವಿಶೇಷ ಸಾಧನೆ ಮಾಡಿದ್ದಾರೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಈ ಸಾಧನೆ ಮೆಚ್ಚುಗೆಗೆ ಪಾತ್ರವಾಗಿದೆ.

ಪ್ರಾಂಶುಪಾಲರಾದ ಗಣೇಶ್ ಮೊಗವೀರರ ಸಾರಥ್ಯದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು ಅನುಭವಿ ಉಪನ್ಯಾಸಕ ವೃಂದದವರ ಸತತ ಪರಿಶ್ರಮದಿಂದ ವಿದ್ಯಾರ್ಥಿಗಳು ದಾಖಲೆಯ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ. ಗ್ರಾಮೀಣ ಭಾಗದ ಹೆಚ್ಚಿನ ವಿದ್ಯಾರ್ಥಿಗಳು 10 ನೇ ತರಗತಿಯಲ್ಲಿ ಶೇಕಡಾ 40 ಅಂಕ ಪಡೆದ ವಿದ್ಯಾರ್ಥಿಗಳು ಶೇಕಡಾ 85.90 ಕ್ಕೂ ಹೆಚ್ಚು ಅಂಕಗಳಿಸಿರುವುದು ಜನತಾ ಕಾಲೇಜಿನ ಸಾಧನೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!