spot_img
Saturday, April 11, 2026
spot_img

ಕುಂದಾಪುರ: ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿಗೆ ಶೇ.96.88% ಫಲಿತಾಂಶ

ಕುಂದಾಪುರದ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗ ಶೇಕಡಾ 97.14% ಹಾಗೂ ವಿಜ್ಞಾನ ವಿಭಾಗದಲ್ಲಿ ಶೇಕಡಾ 96.72% ಫಲಿತಾಂಶ ಲಭಿಸಿದ್ದು, ಶೇಕಡಾ 96.88% ಕಾಲೇಜಿನ ಫಲಿತಾಂಶವಾಗಿದೆ.
ವಾಣಿಜ್ಯ ವಿಭಾಗದಲ್ಲಿ ವಿದ್ಯಾಶ್ರೀ 600 ರಲ್ಲಿ 591 ಅಂಕ ಪಡೆದು ರಾಜ್ಯಕ್ಕೆ ಹತ್ತನೇ ರ‍್ಯಾಂಕ್ ಹಾಗೂ ಕಾಲೇಜಿಗೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿರುತ್ತಾಳೆ. ಪ್ರಥ್ವಿರಾಜ್ ಗಾಣಿಗ 600ರಲ್ಲಿ 590 ಅಂಕ ಪಡೆದು ರಾಜ್ಯಕ್ಕೆ 11ನೇ ರ‍್ಯಾಂಕ್ ಹಾಗೂ ವೈಷ್ಣವಿ 600ರಲ್ಲಿ 588 ಅಂಕ ಪಡೆದು ರಾಜ್ಯಕ್ಕೆ 13ನೇ ರ‍್ಯಾಂಕ್ ಪಡೆದು ವಾಣಿಜ್ಯ ವಿಭಾಗದಲ್ಲಿ ಕ್ರಮವಾಗಿ ದ್ವಿತೀಯ, ತೃತೀಯ ಸ್ಥಾನ ಹಂಚಿಕೊಂಡಿದ್ದಾರೆ. ಕನ್ನಿಕಾ 600ರಲ್ಲಿ 580 ಹಾಗೂ ಐಶ್ವರ್ಯ 600ರಲ್ಲಿ 579 ಅಂಕಗಳನ್ನು ಪಡೆದು ವಿಜ್ಞಾನ ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಕಾಲೇಜಿನ ಫಲಿತಾಂಶದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ 34, ಪ್ರಥಮ ಶ್ರೇಣಿಯಲ್ಲಿ 52 ವಿದ್ಯಾರ್ಥಿಗಳು ತೇಗರ್ಡೆ ಹೊಂದಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಸಂಚಾಲಕರು, ಪ್ರಾಂಶುಪಾಲರು, ಆಡಳಿತ ಮಂಡಳಿ ಹಾಗೂ ಉಪನ್ಯಾಸಕ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!