spot_img
Tuesday, April 14, 2026
spot_img

ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೇಬಲ್ ಟ್ರಸ್ಟ್: ಎ.16ರಂದು ‘ಕಲ್ಪವೃಕ್ಷ’

ಕುಂದಾಪುರ: ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜರವರ ಸಂಸ್ಮರಣಾ ಕಾರ್ಯಕ್ರಮ ‘ಕಲ್ಪವೃಕ್ಷ’ ಏಪ್ರಿಲ್ 16 ಗುರುವಾರ ಸಂಜೆ 6 ಗಂಟೆಗೆ ಮಾರಣಕಟ್ಟೆ ‘ಅನುಗ್ರಹ’ದ ವಠಾರದಲ್ಲಿ ನಡೆಯಲಿದೆ.

ಸಂಜೆ 7ರಿಂದ ಸಭಾ ಕಾರ್ಯಕ್ರಮ ಹಾಗೂ ದಿ.ಸುಬ್ರಹ್ಮಣ್ಯ ಮಂಜರವರ ನೆನಪಿನಲ್ಲಿ ನೆರವು ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ವೇ.ಮೂ.ದಿನಕರ ಉಡುಪ ಇವರಿಗೆ ವೈದಿಕ ರತ್ನ ಪ್ರಶಸ್ತಿ, ನಾಡೋಜ ಡಾ.ಜಿ.ಶಂಕರ್ ಅವರಿಗೆ ಅಮೂಲ್ಯ ರತ್ನ ಪ್ರಶಸ್ತಿ, ಗೋಪಾಡಿ ಶ್ರೀನಿವಾಸ ರಾವ್ ಅವರಿಗೆ ಸೇವಾ ರತ್ನ ಪ್ರಶಸ್ತಿ, ಶಿವಾನಂದ ಹೆಗ್ಡೆ ಅವರಿಗೆ ಕಲಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಸಂಜೆ 6 ಗಂಟೆಗೆ ಅಂತರಾಷ್ಟ್ರೀಯ ಖ್ಯಾತಿಯ ಜಾದೂಗಾರ್ ಸತೀಶ ಹೆಮ್ಮಾಡಿ ಅವರಿಂದ ಮಿರಾಕಲ್ ಮ್ಯಾಜಿಕ್ ನಡೆಯಲಿದೆ. ರಾತ್ರಿ 9 ಗಂಟೆಯಿಂದ ಸಾಲಿಗ್ರಾಮ ಮೇಳದವರಿಂದ ರಂಗನಾಯಕಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಎಂ.ಎಸ್.ಮಂಜ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!