spot_img
Tuesday, April 14, 2026
spot_img

ಅಂಪಾರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನ ಆಚರಣೆ

ಅಂಪಾರು: ದೇಶ ಕಂಡ ಮಹಾನ್ ನಾಯಕ, ಭಾರತದ ಸಂವಿಧಾನ ಶಿಲ್ಪಿ ಡಾ.ಬಿ. ಆರ್ ಅಂಬೇಡ್ಕರ್ ಅವರ ೧೩೫ನೇ ಜಯಂತಿಯನ್ನು ಜೆಸಿ‌ಐ ಹಾಲಾಡಿ ವಾರಾಹಿ ಘಟಕದ ವತಿಯಿಂದ ಏಪ್ರಿಲ್ 14ರಂದು ಅಂಪಾರಿನ ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಚರಿಸಲಾಯಿತು.

ಹಾಲಾಡಿ ಜೆಸಿ‌ಐನ ಅಧ್ಯಕ್ಷರಾದ ಜೆಸಿ ಪ್ರದೀಪ್ ಹಾಲಾಡಿಯವರು ದೀಪವನ್ನು ಬೆಳಗಿಸಿ, ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ವಿವಿಧ ಸಂಸ್ಕೃತಿ, ಧರ್ಮದವರು ನೆಲೆಸಿರುವ ಭಾರತ ದೇಶಕ್ಕೆ ಸಮರ್ಥವಾದ ಸಂವಿಧಾನವನ್ನು ಅಂಬೇಡ್ಕರ್ ನೀಡಿದ್ದಾರೆ, ಅವರ ಮಾದರಿ ಬದುಕು, ತತ್ವ, ಚಿಂತನೆಗಳು ಪ್ರತಿಯೊಬ್ಬರಿಗೂ ಮಾದರಿಯಾಗಿದೆ, ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ಬಹು ದೊಡ್ಡ ಆಸ್ತಿ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಮುಖ್ಯ ಅತಿಥಿಯಾದ ಮುಖ್ಯ ಶಿಕ್ಷಕಿ ಸರೋಜಾ ಅವರು ಆಗಮಿಸಿ ‘ಅಂಬೇಡ್ಕರ್ ಅವರು ದೇಶ ಕಂಡ ಮಹಾನ್ ಮಾನವತಾವಾದಿ’ ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಜಯಕರ, ಸಹ ಶಿಕ್ಷಕಿಯರಾದ ಶೈಲಜಾ ಶೈಲಶ್ರೀ, ಸೌಭಾಗ್ಯಲಕ್ಷ್ಮಿ, ಆಶಾ, ಪ್ರತಿಮಾ, ಶೋಭ, ಶ್ವೇತಾ, ಭವ್ಯ ಮತ್ತು ಜೆಸಿ‌ಐ ಸದಸ್ಯರು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!