spot_img
Friday, April 17, 2026
spot_img

ಕೃಷಿ, ಆರೋಗ್ಯ ಕ್ಷೇತ್ರದ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಯಬೇಕು-ಯು.ಟಿ ಖಾದರ್

ಕುಂದಾಪುರ: ಮೂಡ್ಲಕಟ್ಟೆಯ ಐ‌ಎಂಜೆ ಶಿಕ್ಷಣ ಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ’ಕ್ವಾಂಟಮ್ ಕಂಪ್ಯೂಟೇಶನ್, ಪ್ರಿಸಿಸನ್ ಇನ್ಸ್ಟ್ರುಮೆಂಟೇಶನ್ ಮತ್ತು ಎಮರ್ಜಿಂಗ್ ರಿಸರ್ಚ್ ಇನ್ಫ್ರಾಸ್ಟ್ರಕ್ಚರ್’ ವಿಷಯದ ಕುರಿತಾದ ರಾಷ್ಟ್ರೀಯ ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು. ಟಿ. ಖಾದರ್ ಅವರು ಮಾತನಾಡಿದರು.

ಕ್ವಾಂಟಮ್ ನಂತಹ ಆಧುನಿಕ ವಿಷಯ ಗಳೊಂದಿಗೆ ಕೃಷಿ, ಆರೋಗ್ಯ ಕ್ಷೇತ್ರದ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಯಬೇಕಿದೆ. ಇದು ಕೃಷಿ ಸಮಸ್ಯೆಗಳ ಸುಧಾರಣೆ ಹಾಗೂ ಉತ್ತಮ ಆರೋಗ್ಯ ಸೇವೆ ಒದಗಿಸಲು ಸಹಕಾರಿಯಾಗುತ್ತದೆ ಎಂದು ಖಾದರ್ ತಿಳಿಸಿದರು. ಇಂತಹ ಸಂಶೋಧನಾ ಕೇಂದ್ರಗಳಿಗೆ ಸರ್ಕಾರದಿಂದ ಸಬ್ಸಿಡಿ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರೊಂದಿಗೆ ಚರ್ಚಿಸುವುದಾಗಿ ಸ್ಪೀಕರ್ ಭರವಸೆ ನೀಡಿದರು.

ಮೆಟ್ರೋ ನಗರಗಳಲ್ಲಿ ಮಾತ್ರ ಕಾಣಸಿಗುವ ’ಕ್ವಾಂಟಮ್ ಕಂಪ್ಯೂಟರ್ ಸಂಶೋಧನಾ ಕೇಂದ್ರ’ ಇಂದು ಮೂಡ್ಲಕಟ್ಟೆಯಂತಹ ಗ್ರಾಮೀಣ ಭಾಗದಲ್ಲಿ ಆರಂಭಗೊಂಡಿರುವುದು ಶ್ಲಾಘನೀಯ ಎಂದು ಪ್ರಮುಖ ಸಂಶೋಧಕ ಪ್ರೊ. ಸಪ್ತರ್ಷಿ ಚೌಧರಿ ಅಭಿಪ್ರಾಯಪಟ್ಟರು.

ಐ‌ಎಂಜೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸಿದ್ದಾರ್ಥ್ ಜೆ. ಶೆಟ್ಟಿ ಅಧ್ಯಕ್ಷೀಯ ಭಾಷಣದಲ್ಲಿ ಶುಭ ಹಾರೈಸಿದರು. ವಿ‌ಇಸಿಸಿ ಕೊಲ್ಕತ್ತಾ ಇದರ ವೈಜ್ಞಾನಿಕ ಅಧಿಕಾರಿಯಾಗಿರುವ ಡಾ. ಪರ್ಣಿಕಾ ದಾಸ್ ಮುಖ್ಯ ಅತಿಥಿಯಾಗಮಿಸಿದ್ದರು. ಐ ಎಮ್ ಜೆ ಐ ಆರ್ ನಿರ್ದೇಶಕರಾದ ಡಾ. ಸತ್ಯಜಿತ್ ಎರಡುದಿನಗಳ ವರದಿ ನೀಡಿದರು, ಐ ಎಂ ಜೆ ಸಂಸ್ಥೆಯ ಅಕಾಡಮಿಕ್ ನಿರ್ದೇಶಕರಾದ ಡಾ. ಎಸ್ ಎನ್.ಭಟ್ ಸ್ವಾಗತಿಸಿದರು . ಸಂಸ್ಥೆಯ ಬ್ರ್ಯಾಂಡ್ ಬಿಲ್ಡಿಂಗ್ ಡೈರೆಕ್ಟರ್ ಆಗಿರುವ ಡಾ. ರಾಮಕೃಷ್ಣ ಹೆಗಡೆ ವಂದಿಸಿದರು ಪ್ರಾಧ್ಯಾಪಕಿ ರಾಜೇಶ್ವರಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!