spot_img
Thursday, April 16, 2026
spot_img

ಹಳ್ನಾಡು: ತುಳಸಿ ವಿದ್ಯಾ ಮಂದಿರದ ನೂತನ ಕಟ್ಟಡದ ಲೋಕಾರ್ಪಣೆ

ಹಳ್ನಾಡಿನ ತುಳಸಿ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡದ ಲೋಕಾರ್ಪಣಾ ಕಾರ್ಯಕ್ರಮ ನೆರವೇರಿತು. ಕಟ್ಟಡದ ಉದ್ಘಾಟನೆಯನ್ನು ಬೈಲೂರಿನ ಶ್ರೀ ರಾಮಕೃಷ್ಣ ಆಶ್ರಮದ ಶ್ರೀ ಸ್ವಾಮಿ ವಿನಾಯಕಾನಂದ ಸ್ವಾಮೀಜಿಯವರು ನೆರವೇರಿಸಿ ದೀಪ ಪ್ರಜ್ವಲನಗೊಳಿಸಿ ಆರ್ಶೀರ್ವಚನ ನೀಡಿದರು.
  ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಉದ್ಯಮಿಗಳು ಹಾಗೂ ಕಟ್ಕೇರಿ ನಂದಗೋಕುಲ ಶಿಶುಮಂದಿರದ ವ್ಯವಸ್ಥಾಪಕರಾದ ಪ್ರೇಮಾನಂದ ಶೆಟ್ಟಿ ಯವರು ಶುಭಾಶಂಸನೆಯನ್ನು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕರಾದ  ನರೇಂದ್ರ ಕುಮಾರ ಕೋಟರವರು ಮಾತನಾಡಿ ತುಳಸಿ ವಿದ್ಯಾ ಸಂಸ್ಥೆಯು ಹೀಗೆ ಎತ್ತರವಾಗಿ ಬೆಳೆದು ವಿದ್ಯಾರ್ಥಿಗಳ ಜೀವನವು ಪ್ರಜ್ವಲಿಸಲಿ ಎಂದು ಹಾರೈಸಿದರು.
ಇನ್ನೋರ್ವ ಮುಖ್ಯ ಅತಿಥಿಯಾದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರರಾದ ಹಳ್ನಾಡಿನ  ದೇವಾನಂದ ಶೆಟ್ಟಿ ಯವರು ಮಾತನಾಡಿ ಉತ್ತಮ ಸಮಾಜಕ್ಕಾಗಿ ಒಳ್ಳೆಯ ಶಿಕ್ಷಣ ಕೊಡಬೇಕೆಂಬ ಉದ್ದೇಶದಿಂದ ಸ್ಥಾಪಿತಗೊಂಡ ತುಳಸಿ ಎಂಬ ಶಿಕ್ಷಣ ಸಂಸ್ಥೆಯು ಇನ್ನಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವನ್ನು ನೀಡುವಂತಾಗಲಿ ಎಂದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!