spot_img
Saturday, April 18, 2026
spot_img

ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೇಬಲ್ ಟ್ರಸ್ಟ್: ‘ಕಲ್ಪವೃಕ್ಷ’ ಪ್ರಶಸ್ತಿ ಪ್ರದಾನ, ‘ನೆರವು’ ವಿತರಣೆ

ಕುಂದಾಪುರ: ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜರವರ ಸಂಸ್ಮರಣಾ ಕಾರ್ಯಕ್ರಮ ಕಲ್ಪವೃಕ್ಷ ಏಪ್ರಿಲ್ 16 ರಂದು ಮಾರಣಕಟ್ಟೆ ಅನುಗ್ರಹದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಂ.ಎಸ್.ಮಂಜ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ತಂದೆಯ ಹೆಸರಲ್ಲಿ ಕಟುಂಬ ಸದಸ್ಯರೆಲ್ಲ ಒಟ್ಟಾಗಿ ಈ ಕಾರ್ಯಕ್ರಮವನ್ನು ಕಳೆದ ಹತ್ತು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದೇವೆ. ಸಮಾಜದಲ್ಲಿನ ಸಾಧಕರನ್ನು ಗುರುತಿಸುವುದು ಹಾಗೂ ವಿವಿಧ ನೆರವನ್ನು ನೀಡಲಾಗುತ್ತಿದೆ. ಈ ಬಾರಿಯೂ ಕೂಡಾ ವೈದಿಕ ರತ್ನ, ಸೇವಾ ರತ್ನ, ಅಮೂಲ್ಯ ರತ್ನ, ಕಲಾ ರತ್ನ ಪ್ರಶಸ್ತಿಗೆ ಆರ್ಹರನ್ನು ಆಯ್ಕೆ ಮಾಡಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದೇವೆ. ಸಮಾಜಕ್ಕೆ ಸ್ಪಂದಿಸುವ ಕೆಲಸ ನಿರಂತರವಾಗಿ ಮಾಡುತ್ತೇನೆ. ಸಮಾಜದಲ್ಲಿ ಸಾಧನೆ ಮಾಡಿದಾಗ, ಜನೋಪಯೋಗಿ ಕೆಲಸ ಮಾಡಿದಾಗ ಅವರನ್ನು ಗುರುತಿಸಿ ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ಸೇವಾ ರತ್ನ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಹಿರಿಯ ಹೋಟೆಲ್ ಉದ್ಯಮಿ ಗೋಪಾಡಿ ಶ್ರೀನಿವಾಸ ರಾವ್ ನಾವು ಸಮಾಜವನ್ನು ಬಿಟ್ಟು ಇರಲು ಸಾಧ್ಯವೇ ಇಲ್ಲ. ಸಮಾಜ ನಮ್ಮನ್ನು ಈ ಹಂತಕ್ಕೆ ತಂದಿದೆ. ಹಾಗಾಗಿ ಸಮಾಜಕ್ಕೂ ಸ್ಪಂದಿಸಬೇಕಾದದ್ದು ನಮ್ಮ ಕರ್ತವ್ಯವಾಗಿದೆ. ಕೃಷ್ಣಮೂರ್ತಿ ಮಂಜರು ಸೇವಾ ಕೈಂಕರ್ಯದಲ್ಲಿ ವಿಶೇಷವಾದ ವ್ಯಕ್ತಿ. ಅವರ ನೇತೃತ್ವ ಧಾರ್ಮಿಕ, ಶೈಕ್ಷಣಿಕ ವಲಯದಲ್ಲಿ ಹೊಸ ಬದಲಾವಣೆಗೆ ಕಾರಣವಾಗಿದೆ ಎಂದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಸಿ.ಸದಾಶಿವ ಶೆಟ್ಟಿ, ಕೊಲ್ಲೂರು ಮೂಕಾಂಬಿಕ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ರಾಜೇಶ ಕಾರಂತ, ರಘುರಾಮ ದೇವಾಡಿಗ, ಸಾಲಿಗ್ರಾಮ ಮೇಳದ ಯಜಮಾನರಾದ ಪಿ.ಕಿಶನ್ ಹೆಗ್ಡೆ, ಮುಂಬಯಿ ಹೋಟೆಲ್ ಉದ್ಯಮಿ ಅಶೋಕ್ ಶೆಟ್ಟಿ ಬೆಳ್ಳಾಡಿ, ಮಾರಣಕಟ್ಟೆ ದೇವಸ್ಥಾನದ ಅರ್ಚಕರಾದ ಅನಂತರಾಮ ಮಂಜ, ಟ್ರಸ್ಟ್ ಕಾರ್ಯಾಧ್ಯಕ್ಷರಾದ ಎಂ.ಎಸ್.ನಾಗರಾಜ ಮಂಜ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಜ್ಯೋತಿಷಿ, ಪುರೋಹಿತರಾದ ವೇ.ಮೂ.ದಿನಕರ ಉಡುಪ ಇವರಿಗೆ ವೈದಿಕ ರತ್ನ ಪ್ರಶಸ್ತಿ, ಹೋಟೆಲ್ ಉದ್ಯಮಿ, ಮಯೂರ ಸಮೂಹ ಹೋಟೆಲ್‌ಗಳ ಸಂಸ್ಥಾಪಕರಾದ ಗೋಪಾಡಿ ಶ್ರೀನಿವಾಸ ರಾವ್ ಅವರಿಗೆ ಸೇವಾ ರತ್ನ ಪ್ರಶಸ್ತಿ, ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಇದರ ನಿರ್ದೇಶಕರಾದ ಶಿವಾನಂದ ಹೆಗ್ಡೆ ಅವರಿಗೆ ಕಲಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಟ್ರಸ್ಟ್‌ನ ಗೌರವಾಧ್ಯಕ್ಷರಾದ ಎಂ.ಎಸ್.ಶ್ರೀಧರ ಮಂಜರು ಸ್ವಾಗತಿಸಿದರು. ಕೊಲ್ಲೂರು ದೇವಸ್ಥಾನದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಿವೃತ್ತ ಮುಖ್ಯೋಪಾಧ್ಯಾಯರಾದ ಶಶಿಧರ ಶೆಟ್ಟಿ ವಂಡ್ಸೆ, ನಿರಾಮಯ ಸೊಸೈಟಿ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ವಂಡ್ಸೆ, ಶಿಕ್ಷಕ ವೆಂಕಟೇಶ ಮಂಜ ಸನ್ಮಾನ ಪತ್ರ ವಾಚಿಸಿದರು. ಪತ್ರಕರ್ತ ಪ್ರಭಾಕರ ಆಚಾರ್ಯ ಚಿತ್ತೂರು ನೆರವು ಫಲಾನುಭವಿಗಳ ಪಟ್ಟಿ ವಾಚಿಸಿದರು. ವಿಘ್ನೇಶ್ವರ ಮಂಜ ವಂದಿಸಿದರು. ದಾಮೋದರ ಶರ್ಮ ಬಾರಕೂರು ಕಾರ್ಯಕ್ರಮ ನಿರ್ವಹಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಅಂತರಾಷ್ಟ್ರೀಯ ಖ್ಯಾತಿಯ ಜಾದೂಗಾರ್ ಸತೀಶ ಹೆಮ್ಮಾಡಿ ಅವರಿಂದ ಮಿರಾಕಲ್ ಮ್ಯಾಜಿಕ್ ಕಾರ್ಯಕ್ರಮ, ರಾತ್ರಿ 9 ಗಂಟೆಯಿಂದ ಸಾಲಿಗ್ರಾಮ ಮೇಳದವರಿಂದ ರಂಗನಾಯಕಿ ಯಕ್ಷಗಾನ ಪ್ರದರ್ಶನಗೊಂಡಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!