spot_img
Monday, April 20, 2026
spot_img

ಎಕ್ಸಲೆಂಟ್ ಕುಂದಾಪುರ: ಚಿಣ್ಣರ ಬೇಸಿಗೆ ಶಿಬಿರ ‘ಬೆಸುಗೆ’ ಉದ್ಘಾಟನೆ

ಕುಂದಾಪುರ:ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಹೈಸ್ಕೂಲ್ ಇದರ ಆವರಣದಲ್ಲಿ ಚಿಣ್ಣರ ಮನವನ್ನು ತಣಿಸುವ ಸಲುವಾಗಿ ಎಕ್ಸಲೆಂಟ್ ವಿದ್ಯಾಸಂಸ್ಥೆಯು ಚಿಣ್ಣರ ಬೇಸಿಗೆ ಶಿಬಿರವಾದ ಬೆಸುಗೆ ಶೀರ್ಷಿಕೆಯಡಿಯಲ್ಲಿ ಬೇಸಿಗೆ ಶಿಬಿರವನ್ನು ಎ.೨೦ರಂದು ಉದ್ಘಾಟಿಸಲಾಯಿತು.

ಎಪ್ರಿಲ್ 20ರಿಂದ ಎ.25ರ ವರೆಗಿನ ಆರು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸ್ಥಳೀಯ ವಿದ್ಯಾರ್ಥಿನಿ ರಾಷ್ಟ್ರೀಯ ಚೆಸ್ (ಚದುರಂಗ) ನಲ್ಲಿ ದ್ವಿತೀಯ ಸ್ಥಾನ ಗಳಿಸಿದ ಕುಮಾರಿ ಆರಾಧ್ಯ ಎಸ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಲೇಖಕರು ಚಿಂತಕರು ಆದ ನರೇಂದ್ರ ಕುಮಾರ್ ಕೋಟ ಉಪಸ್ಥಿತರಿದ್ದರು. ಎಂ ಎಂ ಹೆಗ್ಡೆ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಎಂ ಮಹೇಶ್ ಹೆಗ್ಡೆ ಯವರು ಈ ಶಿಬಿರದಲ್ಲಿ ಭಾಗವಹಿಸಿದ ೩೦೦ಕ್ಕಿಂತಲೂ ಅಧಿಕ ಮಕ್ಕಳಿಗೆ ಶುಭ ಹಾರೈಸಿದರು.

ಸಂಸ್ಥೆಯ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಅವರು ಚಿಣ್ಣರ ಕುರಿತು ತಮ್ಮ ಬಾಲ್ಯದಲ್ಲಾದ ಅನುಭವಗಳನ್ನು ಹಂಚಿಕೊಂಡರು. ಎಕ್ಸಲೆಂಟ್ ಹೈಸ್ಕೂಲ್ ಮುಖ್ಯೋಪಾಧ್ಯಾಯಿನಿ ಸರೋಜಿನಿ ಪಿ ಆಚಾರ್ಯ ಪ್ರಾಸ್ತವಿಕ ಮಾತುಗಳನ್ನಾಡಿದರು. ವಾಣಿಜ್ಯ ವಿಭಾಗದ ಅರ್ಥಶಾಸ್ತ್ರ ಉಪನ್ಯಾಸಕಿ ಅಕ್ಷತಾ ಸ್ವಾಗತಿಸಿದರು. ಅತಿಥಿಗಳ ಪರಿಚಯವನ್ನು ಸಂಸ್ಥೆಯ ಶಿಕ್ಷಕಿಯರಾದ ಶಿಲ್ಪರಾಣಿ ಹಾಗೂ ಭವ್ಯಶ್ರೀ ಅತಿಥಿಗಳ ಪರಿಚಯಿಸಿದರು. ಸಿಬಿ‌ಎಸ್ಸಿ ವಿಭಾಗದ ಸಂಯೋಜಕಿ ವಿಶಾಲ ಶೆಟ್ಟಿ ವಂದಿಸಿದರು. ಕನ್ನಡ ಶಿಕ್ಷಕರಾದ ಸಂದೀಪ್ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!