spot_img
Thursday, April 23, 2026
spot_img

ಶಂಕರನಾರಾಯಣದ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ನಲ್ಲಿ ಶೇ.100 ಫಲಿತಾಂಶ. 625ಕ್ಕೆ 625 ಅಂಕಗಳನ್ನು ಗಳಿಸುವುದರೊಂದಿಗೆ ರಾಜ್ಯ ಮಟ್ಟದ ಮೊದಲ ರ‍್ಯಾಂಕ್‌ನೊಂದಿಗೆ ಎಸ್‌ಎಸ್‌ಎಲ್. ಪರೀಕ್ಷೆಯಲ್ಲಿ ಅದ್ಭುತ ಸಾಧನೆ.

ಶಂಕರನಾರಾಯಣ: ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ನ 83 ವಿದ್ಯಾರ್ಥಿಗಳು ಈ ವರ್ಷದ ಎಸ್‌ಎಸ್‌ಎಲ್ಸಿ ಪರೀಕ್ಷೆಗೆ ಹಾಜರಾಗಿ ಎಲ್ಲರೂ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ 50 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 32ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಹಾಗೂ ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಯ ಗರಿಮೆಯನ್ನು ಉತ್ತುಂಗಕ್ಕೇರಿಸಿದ್ದಾರೆ.

ಪ್ರೀತಮ್ ಜಿ ಪೂಜಾರಿ 625 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ತಂದುಕೊಟ್ಟಿದ್ದು, ರಾಜ್ಯ ಮಟ್ಟದ ಮೊದಲ ರ‍್ಯಾಂಕ್‌ನ್ನು ಗಳಿಸಿ ಶಾಲೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ. ನಂದಶ್ರೀ ಶೆಟ್ಟಿ ಮತ್ತು ಗ್ರೀಷ್ಮಾ 616 ಅಂಕಗಳೊದಿಗೆ ದ್ವಿತೀಯ ಸ್ಥಾನ ಪಡೆದಿದ್ದು, ಯುಕ್ತ ಎಂ ಶೆಟ್ಟಿ ಶರ್ವಾಣಿ ಉಪ್ಪೂರ್ 610 ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ವಿನೂತನ ಕಾರ್ಯಯೋಜನೆಗಳು, ಮತ್ತು ಶಿಕ್ಷಕರ ಮಾರ್ಗದರ್ಶನ, ಶ್ರಮ ಹಾಗೂ ನಿರಂತರ ಅಭ್ಯಾಸ ಪ್ರಮುಖ ಕಾರಣವಾಗಿದ್ದು, ಶಾಲೆಯ ಆಡಳಿತ ಮಂಡಳಿ ಹಾಗೂ ಮುಖ್ಯೋಪಾಧ್ಯಾಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!