spot_img
Friday, April 24, 2026
spot_img

ಎಸ್.ಎಸ್.ಎಲ್.ಸಿಯಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ರಾಜ್ಯ ಮಟ್ಟದ Rank ನೊಂದಿಗೆ ಶೇ.100 ಫಲಿತಾಂಶ

ಕಿರಿಮಂಜೇಶ್ವರ: 2025-2026 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಗಣೇಶ್ ಮೊಗವೀರರ ನೇತೃತ್ವದ ಹೊಸ ಆಡಳಿತ ಮಂಡಳಿಯ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಪರಿಪೂರ್ಣ ಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳು ರಾಜ್ಯ ಮಟ್ಟದ Rank ಹಾಗೂ 100% ಫಲಿತಾಂಶದೊಂದಿಗೆ ಬೈಂದೂರು ತಾಲ್ಲೂಕಿನಲ್ಲೇ ಪ್ರಶಂಸೆಗೆ ಪಾತ್ರವಾಗಿದೆ

ವಿದ್ಯಾರ್ಥಿಗಳಾದ ಸಮೃದ್ಧಿ ಸಿ ಖಾರ್ವಿ (616/625) ಹಾಗೂ ಪಂಚಮಿ (616/625) ಅಂಕ ಗಳಿಸಿ ರಾಜ್ಯಮಟ್ಟದಲ್ಲಿ 10ನೇ Rank ಗಳಿಸಿ ಸಾಧನೆ ಮೆರೆದಿದ್ದಾರೆ. ಪರೀಕ್ಷೆಗೆ ಹಾಜರಾದ 68 ವಿದ್ಯಾರ್ಥಿಗಳಲ್ಲಿ ಹಾಗೆಯೇ 25 ವಿದ್ಯಾರ್ಥಿಗಳು ವಿಶೇಷ ಶ್ರೇಣಿ, 41 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯನ್ನು ಹೊಂದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಗಣೇಶ ಮೊಗವೀರರು ಹಾಗೂ ಕಾರ್ಯದರ್ಶಿಯಾಗಿರುವ ಶ್ರೀಮತಿ ಶ್ಯಾಮಲಾ ಗಣೇಶ್ ಮೋಗವೀರರು ಮತ್ತು ಬೋಧಕ, ಬೋಧಕೇತರ ವೃಂದದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!