spot_img
Friday, April 24, 2026
spot_img

ಮದರ್ ತೆರೆಸಾ ಮೆಮೋರಿಯಲ್  ಸ್ಕೂಲ್ ರಾಜ್ಯಕ್ಕೆ ಪ್ರಥಮ Rank : 50  ವಿಶಿಷ್ಟ ಶ್ರೇಣಿ, 32  ಪ್ರಥಮ  ಶ್ರೇಣಿಯೊಂದಿಗೆ 100% ಫಲಿತಾಂಶ

625ಕ್ಕೆ 625 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ Rankನೊಂದಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅದ್ಭುತ ಸಾಧನೆ
ಶಂಕರನಾರಾಯಣ: ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ನ 83 ವಿದ್ಯಾರ್ಥಿಗಳು ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಿ ಎಲ್ಲರೂ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ 50ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ,  ಹಾಗೂ ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತೀರ್ಣರಾಗಿ ಶಾಲೆಯ ಗರಿಮೆಯನ್ನು ಉತ್ತುಂಗಕ್ಕೇರಿಸಿದ್ದಾರೆ.

ಪ್ರೀತಮ್ ಜಿ ಪೂಜಾರಿ 625 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ತಂದುಕೊಟ್ಟಿದ್ದು, ರಾಜ್ಯಕ್ಕೆ ಮೊದಲ Rank ಗಳಿಸಿ ಶಾಲೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ.

ನಂದಶ್ರೀ ಶೆಟ್ಟಿ ಮತ್ತು ಗ್ರೀಷ್ಮ ಜಿ . 616ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದು, ಯುಕ್ತ ಎಂ ಶೆಟ್ಟಿ ಮತ್ತು ಶರ್ವಾಣಿ ಉಪ್ಪುರ್ 610 ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ವಿನೂತನ ಕಾರ್ಯಯೋಜನೆಗಳು, ಮತ್ತು ಶಿಕ್ಷಕರ ಮಾರ್ಗದರ್ಶನ, ಶ್ರಮ ಹಾಗೂ ನಿರಂತರ ಅಭ್ಯಾಸ ಪ್ರಮುಖ ಕಾರಣವಾಗಿದ್ದು, ಶಾಲೆಯ ಆಡಳಿತ ಮಂಡಳಿ ಹಾಗೂ ಮುಖ್ಯೋಪಾಧ್ಯಾಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!