spot_img
Monday, April 27, 2026
spot_img

ಕಠಿಣ ಪರಿಶ್ರಮದಿಂದ ಪ್ರತಿಭೆ ಆನಾವರಣ-ಜಯಕರ ಶೆಟ್ಟಿ |ಶಂಕರನಾರಾಯಣ ಕಾಲೇಜು ಪ್ರತಿಭಾ ದಿನಾಚರಣೆ

ಕುಂದಾಪುರ: ಆಧುನಿಕ ಪ್ರಪಂಚದಲ್ಲಿ ವಿದ್ಯಾರ್ಥಿಗಳು ಪ್ರತಿಭಾನ್ವಿತರಾಗಿ ಬೆಳೆಯಲು ಉತ್ತಮ ಅವಕಾಶಗಳಿವೆ. ಪೋಷಕರ ಮತ್ತು ಅಧ್ಯಾಪಕರ ಮಾರ್ಗದರ್ಶನದಲ್ಲಿ ಪರಿಶ್ರಮ ವಹಿಸಿದಾಗ ಸಾಧನೆ ಮಾಡಲು ಸಾಧ್ಯವಿದೆ. ವಿದ್ಯಾರ್ಥಿಗಳಿಗೆ ಎಂತಹದೇ ಬಡತನ ಸಂಕಷ್ಟಗಳಿದ್ದರೂ ಅವುಗಳನ್ನು ಮೀರಿ ಕಠಿಣ ಪರಿಶ್ರಮದಿಂದ ಪ್ರತಿಭಾನ್ವಿತರಾಗಿ ಬೆಳೆಯಬೇಕು ಎಂದು ಕುಂದಾಪುರದ ಭಾರತೀಯ ರೆಡ್ ಕ್ರಾಸ್ ಘಟಕದ ಸಭಾಪತಿ ಜಯಕರ ಶೆಟ್ಟಿ ಅವರು ಹೇಳಿದರು.

ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣ ಇಲ್ಲಿ ನಮ್ಮ ದೇಶ ನಮ್ಮ ಹೆಮ್ಮೆ’ ಎನ್ನುವ ಶೀರ್ಷಿಕೆ ಅಡಿಯಲ್ಲಿ ನಡೆದ ಪ್ರತಿಭಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಬ್ದುಲ್ ಕಲಾಂನಂತೆ ಕನಸು, ಗುರಿಗಳನ್ನು ಹೊಂದಬೇಕೆಂದು ಈ ಗುರಿಯನ್ನು ಸಾಧಿಸುವ ಕಡೆಗೆ ವಿದ್ಯಾರ್ಥಿಗಳು ಹೆಚ್ಚಿನ ಗಮನ ಹರಿಸಿ ವಿದ್ಯಾಭ್ಯಾಸ ಮಾಡಬೇಕು. ಎಂದಿಗಿಂತ ಇಂದು ವಿದ್ಯಾರ್ಥಿಗಳಿಗೆ ಹೆಚ್ಚಿನ ಗುರಿ ಸಾಧಿಸಲು ಉತ್ತಮ ಅವಕಾಶಗಳಿವೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ವೀರ ಕಲ್ಲುಕುಟಿಕ ದೈವಸ್ಥಾನದ ಮೊಕ್ತೇಸರ ಮಂಜುನಾಥ ಶೇಟ್ ಮಾತನಾಡಿ ಶಿಸ್ತು ಮತ್ತು ಶಿಕ್ಷಣದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದ್ದರಿಂದ ವ್ಯಕ್ತಿತ್ವ ವಿಕಸನ ಸಾಧ್ಯವೆಂದು ತಿಳಿಸಿದರು.

ಅಂತರ್ ತರಗತಿ ಪ್ರತಿಭಾ ಸ್ಪರ್ಧೆಗಳ ತೀರ್ಪುಗಾರರಾಗಿ ಹಾಲಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಕುಮಾರ ಶಂಕರನಾರಾಯಣ, ಸಂಗೀತ ಶಿಕ್ಷಕಿ ವಿದುಷಿ ಸುಮಂಗಲ ಐತಾಳ್, ಯಕ್ಷ ತರಬೇತುದಾರ ಕಿಶೋರ್ ಕುಮಾರ್ ಅರೂರು ಆಗಮಿಸಿದ್ದರು.

ಕಾಲೇಜಿನ ಪೋಷಕರ ಸಮಿತಿಯ ಖಜಾಂಚಿ ಕೃಷ್ಣ ಆಚಾರ್ಯ ಐಕ್ಯೂ‌ಎಸಿ ಸಂಚಾಲಕಿ ಡಾ. ನಳಿನಶ್ರೀ ಆರ್.ಎನ್, ಕಾಲೇಜಿನ ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಶ್ರೀಮತಿ ಪ್ರವೀಣಾ ಮತ್ತು ವಿದ್ಯಾರ್ಥಿ ಪ್ರತಿನಿಧಿ ನಿಶ್ಮಿತಾ ಉಪಸ್ಥಿತರಿದ್ದರು. ಕು. ನಾಗರತ್ನ ಮತ್ತು ತಂಡ ಪ್ರಾರ್ಥಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಲೆಫ್ಟಿನೆಂಟ್ ಡಾ. ವಸಂತ್ ಜಿ. ಸ್ವಾಗತಿಸಿದರು. ಪಾಂಡುರಂಗ ಕಾರ್ಯಕ್ರಮ ನಿರೂಪಿಸಿ ಡಾ. ಗಂಗಾಧರ ಆರ್.ಎಚ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!