spot_img
Sunday, June 14, 2026
spot_img

ಲಕ್ಷ್ಮಿ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕೆರೆ: ರಕ್ಷಕ ಶಿಕ್ಷಕ ಸಂಘದ ಸಭೆ

ಕೋಟ: ಲಕ್ಷ್ಮಿ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕೆರೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆಯನ್ನು ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್ ನಾಯಕ ಅವರು ಕಾಲೇಜಿನಲ್ಲಿರುವ ಸಕಲ ಸೌಲಭ್ಯ ಮತ್ತು ಕಾಲೇಜಿನಲ್ಲಿರುವ ಕಲಿಕೆಯ ವಾತಾವರಣದ ಕುರಿತು ಸಮಗ್ರ ಮಾಹಿತಿ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿರುವ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ರಮೇಶ್ ಎಸ್ ಕುಂದರ್ ವಿದ್ಯಾರ್ಜನೆಯ ಪ್ರಾಮುಖ್ಯತೆಯ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ಪೋಷಕರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಸುರೇಶ್ ಪೂಜಾರಿ ಹಾಗೂ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾನಾಧಿಕಾರಿಯಾದ ಡಾ. ರಮೇಶ್ ಆಚಾರ್ ಉಪಸ್ಥಿತರಿದ್ದರು. ರಕ್ಷಕ ಶಿಕ್ಷಕ ಸಂಘದ ಸಂಚಾಲಕರಾದ ಡಾ. ಶಂಕರ್ ನಾಯ್ಕ್ ಬಿ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ರಾಮಚಂದ್ರ ಭಟ್ ಕಾರ್ಯಕ್ರಮವನ್ನು ನಿರ್ವಹಿಸಿ, ವಂದಿಸಿದರು.

ಕಾರ್ಯಕ್ರಮದಲ್ಲಿ‌ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಎಲ್ಲಾ ತರಗತಿಗಳಿಗೆ ಪ್ರತ್ಯೇಕವಾಗಿ ಆಯಾ ತರಗತಿಯ ಶೈಕ್ಷಣಿಕ ಸಲಹೆಗಾರರು ಪೋಷಕರೊಂದಿಗೆ ವಿದ್ಯಾರ್ಥಿಗಳ ಫಲಿತಾಂಶ ಹಾಜರಾತಿ ಹಾಗೂ ಇತರ ವಿಷಯಗಳ ಕುರಿತು ಸಂವಾದ ನಡೆಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!