spot_img
Monday, April 27, 2026
spot_img

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ವಾರ್ಷಿಕೋತ್ಸವ

ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಕುಂದಾಪುರ ಇಲ್ಲಿ ದಿನಾಂಕ ೨೫ ಏಪ್ರಿಲ್ ೨೦೨೬ರಂದು ಕಾಲೇಜು ವಾರ್ಷಿಕೋತ್ಸವವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸುಂದರ್ ರಾಜ್, ಸಿ‌ಎಫ್‌ಓ,ಎನ್ ಎಕ್ಸ್ ಪಿ ಸೆಮಿಕಂಡಕ್ಟರ್ ಇವರು ಆಗಮಿಸಿ ಇಂದಿನ ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನಕ್ಕೆ ಸರಿಸಾಟಿಯಾಗಿ ಕ್ಷಮತೆಯನ್ನು ಬೆಳೆಸಿಕೊಂಡಾಗ ಮಾತ್ರ ಉದ್ಯೋಗಾವಕಾಶಗಳು ಸಿಗಲು ಸಾಧ್ಯ ಎಂದು ತಿಳಿಸಿದರು.

ಎಂಬಿ‌ಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಸ್ವಾಗತಿಸಿದರು. ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ ಇವರು ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಐ.ಎಂ.ಜೆ ವಿದ್ಯಾಸಂಸ್ಥೆಗಳ ಡೈರೆಕ್ಟರ್ ಅಕಾಡೆಮಿಕ್ಸ್ ಆದ ಡಾ. ಎಸ್ ಎನ್ ಭಟ್ ಇವರು ಇಂದಿನ ಎ.ಐ ಯುಗದಲ್ಲಿ ಗೆಲ್ಲಬೇಕಾದರೆ ಅದಕ್ಕೆ ಸರಿಯಾದ ಕ್ಷಮತೆಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಅದೇ ಸಮಯದಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಪ್ರಾಧ್ಯಾಪಕರಾದ ಶ್ರೀಮತಿ ಸುಷ್ಮಾ ಶೆಟ್ಟಿ ಮುಖ್ಯ ಅತಿಥಿಗಳ ಪರಿಚಯವನ್ನು ನೀಡಿದರು. ಪ್ರಾಧ್ಯಾಪಕರಾದ ಶ್ರೀಮತಿ ಫರಾನ ವಂದಿಸಿದರು. ಎಂಬಿ‌ಎ ವಿದ್ಯಾರ್ಥಿಗಳಾದ ಶಾಂಭವಿ ಮತ್ತು Pಅಧಿತಿ ಕಾರ್ಯಕ್ರಮವನ್ನು ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!