spot_img
Friday, May 1, 2026
spot_img

ಸೃಜನಶೀಲ ಕಾರ್ಯಕ್ರಮಗಳಿಂದ ಶೈಕ್ಷಣಿಕ ಉನ್ನತಿ-ಗುರುರಾಜ್ ಶೆಟ್ಟಿ ಗಂಟಿಹೊಳೆ | ಶಂಕರನಾರಾಯಣ ಕಾಲೇಜು ವಾರ್ಷಿಕೋತ್ಸವ

ಶಂಕರನಾರಾಯಣ: ಗ್ರಾಮೀಣ ಭಾಗದ ಉನ್ನತ ಶಿಕ್ಷಣ ಸಂಸ್ಥೆ ಶಂಕರನಾರಾಯಣದ ಪದವಿ ಕಾಲೇಜು ವೈವಿಧ್ಯಮಯ ವಿದ್ಯಾರ್ಥಿ ಸ್ನೇಹಿ ಅಭಿವೃದ್ದಿ ಯೋಜನೆಗಳಿಂದ ರಾಜ್ಯದಲ್ಲಿ ಉತ್ತಮ ಹೆಸರು ಗಳಿಸಿದೆ. ಸ್ಫರ್ಧಾತ್ಮಕ ಪರೀಕ್ಷಾ ತರಬೇತಿ, ಉಚಿತ ಮಧ್ಯಾಹ್ನದ ಯೋಜನೆ ಮತ್ತು ಯುವ ಧ್ವನಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಬೆಳವಣಿಗೆಯ ಅವಕಾಶ ಒದಗಿಸಿವೆ. ಜ್ಞಾನಾರ್ಜನೆಗೆ ಬೇಕಾದ ನವೀನ ಮಾದರಿಯ ಕಾರ್ಯಕ್ರಮಗಳನ್ನು ಪ್ರಾರಂಭಿಸಿರುವುದು ಶ್ಲಾಘನೀಯ. ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸೃಜನಶೀಲ, ಅನುಭವವುಳ್ಳ, ಕ್ರಿಯಾಶೀಲ ಅಧ್ಯಾಪಕರ ಪರಿಶ್ರಮದಿಂದ ಶೈಕ್ಷಣಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಮಹತ್ವ ಪಡೆದಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣದಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಿದ್ದರು. ದಿಕ್ಸೂಚಿ ಭಾಷಣ ಮಾಡಿದ ವಂಡಾರು ಶ್ರೀ ಕೃಷ್ಣ ಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ನ ನಿರ್ದೇಶಕ ಸಂಪತ್ ಶೆಟ್ಟಿ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಪಡೆಯಲು ಶಿಕ್ಷಣ ಅತ್ಯಂತ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ಉತ್ತಮ ಕನಸು, ಗುರಿ, ಕಠಿಣ ಪರಿಶ್ರಮದಿಂದ ತಮ್ಮ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ಪ್ರೇರೇಪಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರಿನ ಕ್ಯಾಂಪ್ಕೋ ನಿಕಟ ಪೂರ್ವ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿಯವರು ಶಂಕರನಾರಾಯಣದಂತ ಗ್ರಾಮೀಣ ಪರಿಸರದಲ್ಲಿ ಯಾವುದೇ ಸೌಲಭ್ಯಗಳಿಲ್ಲದೆ ಆರಂಭವಾದ ಈ ಕಾಲೇಜು ಎಲ್ಲರ ಸಹಕಾರದಿಂದ ಉತ್ತಮ ಸೌಲಭ್ಯಗಳನ್ನು ಹೊಂದಿದೆ. ಗ್ರಾಮೀಣ ಭಾಗದ ಪ್ರತಿಷ್ಠಿತ ಕಾಲೇಜು ಆಗಿ ರಾಜ್ಯ ಮಟ್ಟದಲ್ಲಿ ಹೆಸರು ಗಳಿಸಿರುವುದು ಅತ್ಯಂತ ಸಂತೋಷದ ವಿಷಯ ಎಂದು ಹೇಳಿದರು.

ಕ್ಯಾಂಪ್ಕೋ ಮಂಗಳೂರು ಮತ್ತು ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ ನವೀಕರಿಸಲಾದ ಗಣಕಯಂತ್ರ ಪ್ರಯೋಗಾಲಯವನ್ನು ಅತಿಥಿಗಳು ಉದ್ಘಾಟಿಸಿದರು. ಲೆಫ್ಟಿನೆಂಟ್ ಪದವಿ ಪಡೆದ ಡಾ. ವಸಂತ್ ಜಿ, ಕೆಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮಾನಸ ಅವರನ್ನು ಸನ್ಮಾನಿಸಲಾಯಿತು. ವಿಶೇಷ ಸಾಧನೆಗೈದ ಕೀರ್ತನಾ, ದೀಕ್ಷಾ ಮತ್ತು ಕಾವ್ಯಶ್ರೀ ಅವರನ್ನು ಹೆಚ್.ಕೆ.ಎ.ಸಿ ಸಾಧಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಸ್ವಾಗತಿಸಿದರು. ಕಾಲೇಜಿನ ಪೋಷಕರ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ, ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಲೆಫ್ಟಿನೆಂಟ್ ಡಾ. ವಸಂತ್ ಜಿ, ಐಕ್ಯೂ‌ಎಸಿ ಸಂಚಾಲಕಿ ಡಾ. ನಳಿನಶ್ರೀ, ಹೆಬ್ಗೋಳಿ ಕುಷ್ಟ ಅಗ್ರಿಕಲ್ಚರಲ್ ಕಂಪೆನಿ ಸ್ಥಾಪಕ ಪ್ರವೀಣ್ ಹೆಬ್ಗೋಳಿ, ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಡಾ. ಶೇಖರ್ ಬಿ ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು. ಕು. ಶರಣ್ಯ ಮತ್ತು ತಂಡದವರು ಪ್ರಾರ್ಥಿಸಿದರು. ಸಚಿನ್ ಎಸ್ ನಿರೂಪಿಸಿ ಮಹಲಿಂಗಪ್ಪ ಆರ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!