spot_img
Saturday, May 2, 2026
spot_img

ಶ್ರೀ ಶಾರದಾ ಕಾಲೇಜು ಬಸ್ರೂರು: ‘ಚಿತ್ತಾರ-2026’ರ ಸಮಾರೋಪ

ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಆಹ್ವಾನಿತ ಅಂತರ್ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮ ಅದ್ದೂರಿಯಾಗಿ ಕಾಲೇಜಿನ ದಿ. ಅಪ್ಪಣ್ಣ ಹೆಗ್ಡೆ ವೇದಿಕೆಯಲ್ಲಿ ಜರುಗಿತು.

ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಪ್ರಾಕ್ತನ ವಿದ್ಯಾರ್ಥಿಯಾದ ಸಟ್ವಾಡಿ ವಿಜಯ ಶೆಟ್ಟಿ ಮಾತನಾಡಿ ಕಾಲೇಜು ಜೀವನವೂ ನನ್ನ ಜೀವನದ ಮುಖ್ಯ ಹಂತವಾಗಿದ್ದು, ನನ್ನ ವ್ಯಕ್ತಿತ್ವವನ್ನು ರೂಪಿಸಿದ ಈ ಕಾಲೇಜು ಶಿಸ್ತು, ಮೌಲ್ಯ ಪರಿಶ್ರಮ ಮತ್ತು ಕನಸು ಸಾಧಿಸಲು ಬೇಕಾಗಿರುವ ಧೈರ್ಯವನ್ನು ಕಲಿಸಿದೆ. ಆದ್ದರಿಂದ ವಿದ್ಯಾರ್ಥಿಗಳು ನಿಮ್ಮ ಕನಸು ದೊಡ್ಡದಾಗಿರಲಿ, ಸಮಯವನ್ನು ಸರಿಯಾಗಿ ಬಳಸಿಕೊಳ್ಳಿ ನಿಮ್ಮ ಶಿಕ್ಷಕರನ್ನು ತಂದೆ ತಾಯಿಯವರನ್ನು ಗೌರವಿಸಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಟ್ರಸ್ಟಿ ಸದಸ್ಯರಾದ ಸುಭಾಶ್ಚಂದ್ರ ಶೆಟ್ಟಿ ಕೆ ಸ್ಪರ್ಧೆಯಲ್ಲಿ ಜಯಗಳಿಸಿದ ತಂಡಗಳಿಗೆ ಶುಭಹಾರೈಸಿದರು. ಚಿತ್ತಾರ ೨೦೨೬ ರ ಆಹ್ವಾನಿತ ಅಂತರ್ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕೋಟ ಪಡುಕೆರೆ, ದ್ವಿತೀಯ ಸ್ಥಾನವನ್ನು ಎಸ್.ಎಂ.ಎಸ್ ಕಾಲೇಜು ಬ್ರಹ್ಮಾವರ, ತೃತೀಯ ಸ್ಥಾನವನ್ನು ವಿದ್ಯಾಲಕ್ಷ್ಮೀ ಗ್ರೂಪ್ ಆಫ್ ಇನ್ಸ್‌ಸಿಟ್ಯೂಷನ್ ತಮ್ಮದಾಗಿಸಿಕೊಂಡರು.

ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಬಾಂಡ್ಯ ಸುಧಾಕರ ಶೆಟ್ಟಿ ಮತ್ತು ಆಡಳಿತಾಧಿಕಾರಿ ಮೋಹನ ಕೆ.ಎನ್ ಹಾಗೂ ಚಿತ್ತಾರ- ೨೦೨೬ ರ ಸಂಯೋಜಕರಾದ ಡಾ. ವಿಶ್ವನಾಥ ಆಚಾರ್ಯ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಎನ್ ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕರಾದ ಅಕ್ಷಯ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಚಂದ್ರ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!