spot_img
Monday, May 4, 2026
spot_img

ಎಂ ಐ ಟಿ ಕೆ ಯಲ್ಲಿ ಅರ್ಥ್ ವೀಕ್

ಎಂ ಐ ಟಿ ಕುಂದಾಪುರ ವಿಶ್ವ ಭೂ ದಿನದ (Earth Day)ಅಂಗವಾಗಿ ಆಯೋಜಿಸಲಾಗಿದ್ದ ‘ಭಾರತ ಎನ್ವಿರಾನ್‌ಮೆಂಟ್ ಪ್ರೋಗ್ರಾಂ- ಭಾರತ ಸಸ್ಟೇನಬಲ್ ಕ್ಯಾಂಪಸ್ ಮಿಷನ್ 2026’ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿತು.
ರಿಸರ್ಚ್ ಹೈಟ್ಸ್ ಫೌಂಡೇಶನ್ ಆಶ್ರಯದಲ್ಲಿ ಹಾಗೂ ಎನ್ವಿರಾನ್ಮೆಂಟ್ ಪ್ರೊಟೆಕ್ಷನ್ ಟ್ರೈನಿಂಗ್ ಅಂಡ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಿತು. ಏಪ್ರಿಲ್ 22 ರಿಂದ 29 ರವರೆಗೆ ನಡೆದ ‘ಅರ್ಥ್ ವೀಕ್’ ಸಂಭ್ರಮಾಚರಣೆಯ ಭಾಗವಾಗಿ, ಕ್ಯಾಂಪಸ್‌ನಲ್ಲಿ ಸುಸ್ಥಿರ ಜೀವನಶೈಲಿ ಮತ್ತು ಪರಿಸರ ಜಾಗೃತಿಯನ್ನು ಉತ್ತೇಜಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿತ್ತು.ತ್ಯಾಜ್ಯ ನಿರ್ವಹಣೆ, ಹಸಿರು ಅಭ್ಯಾಸಗಳ ಅಳವಡಿಕೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಹವಾಮಾನ ಬದಲಾವಣೆಯ ಸವಾಲುಗಳನ್ನು ಎದುರಿಸಲು ಮತ್ತು ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ವಿದ್ಯಾರ್ಥಿಗಳು ಉತ್ಸಾಹದಿಂದ ಪ್ರತಿಜ್ಞೆ ಮಾಡಿದರು.
ಈ ಉಪಕ್ರಮವು ಭಾರತ ಸರ್ಕಾರದ ‘ವಿಕಸಿತ ಭಾರತ’ದ ದೃಷ್ಟಿಕೋನ ಹಾಗೂ ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳಿಗೆ  (UN SDG 2030) ಪೂರಕವಾಗಿದೆ.
ಕಾಲೇಜಿನ ಪ್ರಾಂಶುಪಾಲರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!