spot_img
Saturday, May 9, 2026
spot_img

ನಿರಾಮಯ ಸೊಸೈಟಿ ವಂಡ್ಸೆ: ಆಡಳಿತ ಮತ್ತು ಕಾರ್ಯನಿರ್ವಾಹಕ ಮಂಡಳಿ ಸಭೆ: ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಸನ್ಮಾನ

ಕುಂದಾಪುರ:ನಿರಾಮಯ ಸೊಸೈಟಿ ವಂಡ್ಸೆ ಇದರ ಆಡಳಿತ ಮತ್ತು ಕಾರ್ಯನಿರ್ವಾಹಕ ಮಂಡಳಿ ಸಭೆಯು ಮೇ 7ರಂದು ಸೊಸೈಟಿಯ ಕಚೇರಿಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರತೀಕ್ ಬಾಯಲ್ ಇವರ ಉಪಸ್ಥಿತಿಯಲ್ಲಿ ನಿರಾಮಯ ಸೊಸೈಟಿ ಅಧ್ಯಕ್ಷರಾದ ಉದಯ್ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಸೊಸೈಟಿ ವತಿಯಿಂದ ಇನ್ನಷ್ಟು ವಿವಿಧ ರೀತಿಯ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡುವ ಬಗ್ಗೆ ಹಾಗೂ ಸಂಪನ್ಮೂಲ ಕ್ರೋಡಿಕರಣದ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ನಿರಾಮಯ ಸೊಸೈಟಿಯ ಬೆಳವಣಿಗೆ ಹಿಂದಿನ ಮಹಾಶಕ್ತಿ ಹಾಗೂ ವಂಡ್ಸೆ ಗ್ರಾಮ ಪಂಚಾಯತ್ ಗೆ ಆರೋಗ್ಯಕರ ಗ್ರಾಮ ಪಂಚಾಯತ್ ವಿಭಾಗದಲ್ಲಿ ನ್ಯಾಶನಲ್ ಪಂಚಾಯತ್ ಅವಾರ್ಡ್ ಗೆ ಆಯ್ಕೆಯಾಗುವ ಮೂಲಕ ರೂ. 75 ಲಕ್ಷ ಪ್ರಶಸ್ತಿ ಮೊತ್ತ ದೊರೆಯುವಲ್ಲಿ ನಿರಂತರ ಮಾರ್ಗದರ್ಶನ ನೀಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಿರಾಮಯ ಸೊಸೈಟಿಯ ಗೌರವ ಸದಸ್ಯರಾದ ಡಾ. ನಾಗಭೂಷಣ ಉಡುಪ, ಡಾ. ಅತುಲ್ ಕುಮಾರ್ ಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಪ್ರಶಾಂತ್ ಭಟ್, ಡಾ. ಲತಾ ನಾಯಕ್, ಡಾ. ಅಂಜಲಿ ರಾಜ್, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ್, ಕುಂದಾಪುರ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ದೀಪಾ, ಹಕ್ಲಾಡಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ರಮೇಶ್ ಕುಲಾಲ್, ಆಲೂರು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ನಾರಾಯಣ ಶೆಟ್ಟಿ, ನಿರಾಮಯ ಸೊಸೈಟಿಯ ಕಾರ್ಯದರ್ಶಿ ಸುದರ್ಶನ ಶೆಟ್ಟಿ ಕೆರಾಡಿ, ಕೋಶಾಧಿಕಾರಿ ಆಶಾ ಆಚಾರ್ಯ ಇಡೂರು, ಚಿತ್ತೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ, ಆಲೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಜೇಶ್ ದೇವಾಡಿಗ, ಹಕ್ಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ, ವಂಡ್ಸೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಗೋವರ್ಧನ್ ಜೋಗಿ, ಹಕ್ಲಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಸುಭಾಷ್ ಶೆಟ್ಟಿ, ಇಡೂರು ಕುಂಜ್ಞಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಭಾವನ, ರೂಪ ಗೋಪಿ, ಗಣೇಶ ಹೆಬ್ಟಾರ್, ಚಂದ್ರ ಬಿಲ್ಲವ, ಸುಶೀಲಾ, ಪಂಚಾಯತ್ ಕಾರ್ಯದರ್ಶಿಗಳಾದ ಜಯ, ಸುರೇಶ್, ಮಿಥುನ್ ಹೆಮ್ಮಾಡಿ ಮುಂತಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!