spot_img
Tuesday, May 12, 2026
spot_img

ಶಂಕರನಾರಾಯಣ ಕಾಲೇಜು: ವಿಶ್ವ ರೆಡ್ ಕ್ರಾಸ್ ದಿನಾಚರಣೆ

ಕುಂದಾಪುರ: ಮಾನವೀಯ ಸೇವೆ, ರಕ್ತದಾನ ಹಾಗೂ ಸಂಕಷ್ಟದಲ್ಲಿರುವವರಿಗೆ ನೆರವು ನೀಡುವ ಮೂಲಕ ಸಮಾಜದಲ್ಲಿ ರೆಡ್ ಕ್ರಾಸ್ ಸಂಸ್ಥೆ ಮಹತ್ವದ ಪಾತ್ರ ವಹಿಸುತ್ತಿದೆ. ರೆಡ್ ಕ್ರಾಸ್ ಸಂಸ್ಥೆಯು ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದ್ದು, ಯುವಜನತೆ ಸಮಾಜ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮನೋಭಾವ ಬೆಳೆಸಿಕೊಳ್ಳಬೇಕು. ರಕ್ತದಾನದ ಮಹತ್ವ, ಪ್ರಥಮ ಚಿಕಿತ್ಸೆ ಹಾಗೂ ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತರಬೇತಿ ನೀಡುತ್ತದೆ ಎಂದು ವಾಸುಕಿ ಕ್ಲಿನಿಕ್ ಸಿದ್ದಾಪುರದ ವೈದ್ಯರಾದ ಡಾ. ಜಗದೀಶ್ ಶೆಟ್ಟಿ ಹೇಳಿದರು.

ಅವರು ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾಕೋಶ ಮತ್ತು ಯುವ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ನಡೆದ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಲೆಫ್ಟಿನೆಂಟ್ ಡಾ. ವಸಂತ್ ಜಿ., ಕಾಲೇಜಿನ ಐಕ್ಯೂ‌ಎಸಿ ಸಂಚಾಲಕಿ ಡಾ. ನಳಿನಶ್ರೀ ಆರ್ ಎನ್. ಉಪಸ್ಥಿತರಿದ್ದರು.

ಯುವ ರೆಡ್ ಕ್ರಾಸ್ ಸಂಚಾಲಕ ಶ್ರೀ ರಮೇಶ್ ಎನ್.ಎಸ್ ಸ್ವಾಗತಿಸಿ, ಕು. ಅಕ್ಷತಾ ಬಿರಾದಾರ್ ಕಾರ್ಯಕ್ರಮ ನಿರೂಪಿಸಿ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಗಂಗಾಧರ್ ವಂದಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!