spot_img
Tuesday, May 12, 2026
spot_img

ಮೈಕ್ರೋಬಯಾಲಜಿಯಲ್ಲಿ ಬಳ್ಕೂರು ರೂಪಾ ಅವರಿಗೆ ಚಿನ್ನದ ಪದಕ

ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯವು ಇತ್ತೀಚೆಗೆ ನಡೆಸಿದ ಎಂ.ಎಸ್ಸಿ (ಮೈಕ್ರೋಬಯಾಲಜಿ) ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕು ಬಳ್ಕೂರು ಗ್ರಾಮದ ರೂಪಾ ಅವರು ಪ್ರಥಮ ರ್‍ಯಾಂಕ್ ಪಡೆಯುವುದರ ಜೊತೆಗೆ ಬಂಗಾರದ ಪದಕ ಮುಡಿಗೇರಿಸಿಕೊಂಡಿದ್ದಾರೆ.

ಬಸ್ರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಳ್ಕೂರು ನಿವಾಸಿಗಳಾದ ಗೋಪಾಲ ಪೂಜಾರಿ ಹಾಗೂ ಶ್ರೀಮತಿ ಯಶೋಧ ಪೂಜಾರ್ತಿ ದಂಪತಿಯ ಪುತ್ರಿಯಾಗಿರುವ ರೂಪಾ ಅವರು ಹುಟ್ಟಿನಿಂದಲೇ ವಿಕಲಚೇತನರಾದರೂ ವಿಜ್ಞಾನದಂತಹ ಕಠಿಣ ವಿಷಯದಲ್ಲಿ ಈ ಅತ್ಯುನ್ನತ ಸಾಧನೆ ಮಾಡಿರುವುದು ರಾಜ್ಯಕ್ಕೇ ಮಾದರಿಯಾಗಿದೆ.

ಗ್ರಾಮೀಣ ಭಾಗದ ಪ್ರತಿಭೆಯಾಗಿರುವ ರೂಪಾ ಅವರ ಶೈಕ್ಷಣಿಕ ಸಾಧನೆಯ ಹಾದಿಯು ಪ್ರಾಥಮಿಕ/ಪ್ರೌಢ ಶಿಕ್ಷಣ: ಸರ್ಕಾರಿ ಪ್ರೌಢಶಾಲೆ, ಬಸ್ರೂರು. ಪದವಿ ಪೂರ್ವ ಶಿಕ್ಷಣ: ಸರ್ಕಾರಿ ಪದವಿಪೂರ್ವ ಕಾಲೇಜು (ಬೋರ್ಡ್ ಹೈಸ್ಕೂಲ್), ಕುಂದಾಪುರ. ಪದವಿ: ಭಂಡಾರ್ಕರ್ಸ್ ಕಾಲೇಜು, ಕುಂದಾಪುರದಲ್ಲಿ ಮುಗಿಸಿ ಸೂಕ್ಷ್ಮಜೀವವಿಜ್ಞಾನದಂತಹ (Microbiology) ಪ್ರಾಯೋಗಿಕ ಮತ್ತು ಕಠಿಣ ವಿಷಯದಲ್ಲಿ ಈ ಸಾಧನೆ ಮಾಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!