spot_img
Sunday, May 24, 2026
spot_img

ಮೇ.25: ಗುಡ್ಡೆಯಂಗಡಿಯಲ್ಲಿ ಎಸ್.ಕೆ.ಎಫ್ ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್ ಉದ್ಘಾಟನೆ

ಕುಂದಾಪುರ: ಕುಂದಾಪುರ ತಾಲೂಕು ಯಡಾಡಿ-ಮತ್ಯಾಡಿ ಗ್ರಾಮದ ಗುಡ್ಡೆಯಂಗಡಿಯಲ್ಲಿ ನಿರ್ಮಾಣಗೊಂಡಿರುವ ಎಸ್.ಕೆ.ಎಫ್ ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್ ಮೇ 25 ಸೋಮವಾರ ಸಂಜೆ 4.30ಕ್ಕೆ ಉದ್ಘಾಟನೆಗೊಳ್ಳಲಿದೆ.

ಅಳ್ವಾಸ್ ಎಜುಕೇಶನ್ ಫೌಂಡೇಶನ್ ಮೂಡಬಿದಿರೆ ಇದರ ಅಧ್ಯಕ್ಷರಾದ ಡಾ.ಎಮ್.ಮೋಹನ ಆಳ್ವ ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಉದ್ಯಮಿಗಳಾದ ದಿನೇಶ ಹೆಗ್ಡೆ ಮೊಳಹಳ್ಳಿ, ಕಾರ್ಕಳದ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಚೇರ್ಮನ್ ಡಾ.ಸುಧಾಕರ ಶೆಟ್ಟಿ, ಲೆಕ್ಕಪರಿಶೋಧಕರಾದ ಸಿ‌ಎ ಎಸ್.ಎಸ್ ನಾಯಕ ಮಂಗಳೂರು, ಪ್ರಥಮದರ್ಜೆ ಗುತ್ತಿಗೆದಾರರಾದ ಬಿ.ಅರುಣ್ ಕುಮಾರ್ ಹೆಗ್ಡೆ ಯಡಾಡಿ ಮತ್ಯಾಡಿ, ಮೊಳಹಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ, ಸುಜ್ಞಾನ ಎಜುಕೇಶನ್ ಟ್ರಸ್ಟ್ ಚೇರ್ಮನ್ ಡಾ.ರಮೇಶ ಶೆಟ್ಟಿ ಆಗಮಿಸಲಿದ್ದಾರೆ.

ಡಾ.ಜಿ.ರಾಮಕೃಷ್ಣ ಆಚಾರ್ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷರು ಹಾಗೂ ಎಸ್.ಕೆ.ಎಫ್ ಎಲಿಕ್ಸರ್ ಇಂಡಿಯಾ ಪ್ರೈ.ಲಿ ಇದರ ಚೇರ್ಮನ್ ಡಾ.ಜಿ.ರಾಮಕೃಷ್ಣ ಆಚಾರ್, ಟ್ರಸ್ಟ್ ನ ಗೌರವ ಟ್ರಸ್ಟಿ ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ, ಎಸ್.ಕೆ.ಎಫ್ ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್ ತಾಂತ್ರಿಕ ಸಲಹೆಗಾರರಾದ ಎ.ಬಾಲಕೃಷ್ಣ ಸರ್ವರನ್ನು ಕಾರ್ಯಕ್ರಮಕ್ಕೆ ಆಮಂತ್ರಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!