spot_img
Monday, May 25, 2026
spot_img

ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಧಂತಿ ಉತ್ಸವವು ಮೇ 18 ರ ಸೋಮವಾರದಂದು ವಿಜೃಂಭಣೆಯಿಂದ ಸಂಪನ್ನಗೊಂಡಿತು.
ಬೆಳಿಗ್ಗೆ 9.00 ರಿಂದ ಜ್ಯೋತಿಷ್ಯ ವಿದ್ವಾನ್ ತಟ್ಟುವಟ್ಟು ವಾಸುದೇವ ಜೋಯಿಸರ ನೇತೃತ್ವದಲ್ಲಿ 24 ಪರಿಕಲಸ ಸಹಿತ ಪ್ರಧಾನ ಬ್ರಹ್ಮ ಕುಂಭಾಭಿಷೇಕ, ಕಲಾತತ್ವಪೂರ್ವಕ ಪ್ರಧಾನ ಅಧಿವಾಸ ಹೋಮ, ಶ್ರೀ ನಾಗದೇವರಿಗೆ ನವಕ ಪ್ರಧಾನ ಹೋಮ. ಮಧ್ಯಾಹ್ನ 12.00 ರಿಂದ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ನಡೆಯಿತು. ಮಧ್ಯಾಹ್ನ 12.30 ರಿಂದ ಸಾರ್ವಜನಿಕ ಅನ್ನಸಂತರ್ಪಣೆ ಸಂಜೆ 6.00 ರಿಂದ ರಂಗಪೂಜೆ ಮತ್ತು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಹಾಲಾಡಿ ಮತ್ತು ಶ್ರೀ ಮಹಾ ವಿಷ್ಣುಮೂರ್ತಿ ಭಜನಾ ಮಂಡಳಿ ಗೋರಾಜೆ ಇವರಿಂದ ಭಜನಾ ಕಾರ್ಯಕ್ರಮ ಹಾಗೂ ಶ್ರೀ ಸ್ವಾಮಿ ಚಂಡೆ ಬಳಗ ಹಾಲಾಡಿ ಇವರಿಂದ ಚಂಡೆ ವಾದನ ನಡೆಯಿತು. ನಂತರ ಮಹಾ ಮಂಗಳಾರತಿ, ತೀರ್ಥಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಭಾಸ್ಕರ ಅಡಿಗ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ರತ್ನಗಿರಿ ಶ್ರೀ ಲಕ್ಷ್ಮೀ ನರಸಿಂಹ ಗೆಳೆಯರ ಬಳಗದ ಸದಸ್ಯರು ಹಾಗೂ ಗ್ರಾಮಸ್ಥರು ಮತ್ತು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಹಾಗೂ ವರ್ಧಂತಿ ಉತ್ಸವಕ್ಕೆ ದೇಣಿಗೆ ನೀಡಿದ ಹಾಗೂ ದೇವಸ್ಥಾನದ ಚಾಕರಿ ಹಾಗೂ ಕಾರ್ಯಕ್ರಮದಲ್ಲಿ ಸಹಕರಿಸಿದವರನ್ನು ಗುರುತಿಸಿ ಗೌರವಿಸಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!