spot_img
Friday, July 31, 2026
spot_img

ಜಿ ಎಮ್‌ನಲ್ಲಿ ಶಿಕ್ಷಕರಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ

ಬ್ರಹ್ಮಾವರ ಮೇ 20. ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕರ ಬೋಧನಾ ಕೌಶಲ್ಯ ಮತ್ತು ಸಾಮರ್ಥ್ಯವನ್ನು ಅಭಿವೃದ್ಧಿಪಡಿಸಲು ಸಂಸ್ಥೆಯ ಶಿಕ್ಷಕವೃಂದದವರಿಗೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ವೇಗವಾಗಿ ಬದಲಾಗುತ್ತಿರುವ ಇಂದಿನ ಯುಗದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಮಾನಸಿಕ ಆರೋಗ್ಯ ಬಹಳ ಮುಖ್ಯವಾಗಿದೆ. ಶಿಕ್ಷಕರು ಕಾರ್ಯಾಗಾರದಲ್ಲಿ ಕಲಿತ ವಿಷಯಗಳನ್ನು ಅನುಸರಿಸಿ ತರಗತಿಗಳಲ್ಲಿ ಅನುಷ್ಠಾನಗೊಳಿಸಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಪ್ರಯೋಜನ ಸಿಗಬೇಕೆಂದರು.
ಕಾರ್ಯಾಗಾರಕ್ಕೆ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಬ್ರಹ್ಮಾವರ ಎಸ್ ಎಮ್ ಎಸ್ ಶಾಲೆಯ ಪ್ರಾಂಶುಪಾಲೆ ಶ್ರೀಮತಿ ಅಭಿಲಾಷ ಎಸ್ ಮತ್ತು ಮೂಡುಬಿದಿರೆ ಆಳ್ವಾಸ್ ಸೆಂಟ್ರಲ್ ಸ್ಕೂಲ್‌ನ ಶೈಕ್ಷಣಿಕ ನಿರ್ದೇಶಕಿ ಶ್ರೀಮತಿ ಶೈಲಜಾ ಪಿ ಆಗಮಿಸಿದ್ದರು. ಅವರು ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯ ಮತ್ತು ಸ್ವಾಸ್ಥ್ಯವನ್ನು ಉತ್ತೇಜಿಸುವುದರ ಕುರಿತು ಶಿಕ್ಷಕರಿಗೆ ತರಬೇತಿ ನೀಡಿದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ಇಂದು ವಿದ್ಯಾರ್ಥಿಗಳ ಆತ್ಮಹತ್ಯೆ, ಅವರಲ್ಲಿ ಹೆಚ್ಚುತ್ತಿರುವ ಒತ್ತಡ, ಏಕಾಂತ ಮತ್ತು ಖಿನ್ನತೆ ಇದಕ್ಕೆಲ್ಲಾ ಕಾರಣವೇನೆಂಬುದರ ಕುರಿತು ಶಿಕ್ಷಕರು ಯೋಚಿಸಬೇಕು. ವಿದ್ಯಾರ್ಥಿಗಳ ಮಾನಸಿಕ ಆರೋಗ್ಯವನ್ನು ಕಾಪಾಡಲು ಶಿಕ್ಷಕರು ಗಮನ ನೀಡಬೇಕೆಂದರು.
ಚಟುವಟಿಕೆ ಆಧಾರಿತ ಕಾರ್ಯಾಗಾರದಲ್ಲಿ ಮಕ್ಕಳ ಸಾಮಾನ್ಯ ಭಾವಾನಾತ್ಮಕ ಮತ್ತು ವರ್ತನಾ ಸಮಸ್ಯೆಗಳು ಅದರ ಆರಂಭಿಕ ಲಕ್ಷಣ ಮತ್ತು ಸೂಚನೆಗಳನ್ನು ಪತ್ತೆಹಚ್ಚುವಿಕೆ ಅದನ್ನು ಎದುರಿಸುವ ತಂತ್ರ ಬೋಧನೆಯಲ್ಲಿ ಅಳವಡಿಸುವುದರ ಕುರಿತು ತರಬೇತಿಯನ್ನು ನೀಡಲಾಯಿತು. ವಿದ್ಯಾರ್ಥಿಗಳ ಭಾವನಾತ್ಮಕ, ಸಾಮಾಜಿಕ, ವರ್ತನಾ ಮತ್ತು ಮಾನಸಿಕ ಆರೋಗ್ಯವನ್ನು ಬೆಂಬಲಿಸುವ ವಿಧಾನಗಳ ಕುರಿತು ಶಿಕ್ಷಕರು ಪ್ರಾತ್ಯಕ್ಷಿಕ ಅನುಭವ ಪಡೆದುಕೊಂಡರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!