spot_img
Monday, June 15, 2026
spot_img

ಇಂದಿನ ಕಲಿಕೆಯೇ ನಾಳಿನ ನಾಯಕತ್ವದ ಅಡಿಪಾಯ- ಪ್ರೊ. ನರೇಂದ್ರ ಎಲ್ ನಾಯಕ್

ವಿದ್ಯಾರ್ಥಿಗಳು ಇಂದು ಪಡೆಯುವ ಜ್ಞಾನ , ಉತ್ತಮ ಅಭ್ಯಾಸಗಳು ಮತ್ತು ಮೌಲ್ಯಗಳೇ ಅವರ ಭವಿಷ್ಯವನ್ನುರೂಪಿಸುತ್ತವೆ. ಪ್ರತಿದಿನ ಹೊಸ ವಿಷಯಗಳನ್ನು ಕಲಿಯುವ ಆಸಕ್ತಿ ಮತ್ತು ಪರಿಶ್ರಮ ಬೆಳೆಸಿಕೊಂಡಾಗ ಅವರು ನಾಳೆ ಆತ್ಮ ವಿಶ್ವಾಸದಿಂದ ಸಮಾಜವನ್ನು ಮುನ್ನಡೆಸುವ ನಾಯಕರಾಗುತ್ತಾರೆ. ವಿದ್ಯಾರ್ಥಿಗಳು ಜ್ಞಾನ , ಶಿಸ್ತು, ಸಮಯ ಪರಿಪಾಲನೆ ಮತ್ತು ಪರಿಶ್ರಮವನ್ನು ಜೀವನದ ಮೌಲ್ಯಗಳಾಗಿ ಅಳವಡಿಸಿಕೊಳ್ಳಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಆತ್ಮವಿಶ್ವಾಸ ಮತ್ತು ನಿರಂತರ ಅಧ್ಯಯನ ಪ್ರಧಾನವಾದ ಅಂಶವಾಗಿದೆ. ವಿದ್ಯಾರ್ಥಿ ಜೀವನವು ಅಮೂಲ್ಯ ಹಂತವಾಗಿದ್ದು ಸಮಯ ವ್ಯರ್ಥ ಮಾಡದೆಅಧ್ಯಯನವನ್ನುಗಂಭೀರವಾಗಿ ಪರಿಗಣಿಸಬೇಕು ಎಂದು ಎಕ್ಸ್ಪರ್ಟ್ ಶಿಕ್ಷಣ ಮತ್ತು ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಪ್ರೊ. ನರೇಂದ್ರ ಎಲ್ ನಾಯಕ್‌ರವರು ತಿಳಿಸಿದರು
ಅವರು ಎಕ್ಸ್ಪರ್ಟ್ ಪದವಿ ಪೂರ್ವಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಆಯೋಜಿಸಿದ ಓರಿಯಂಟೇಶನ್-2026 ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಶಿಸ್ತಿನ ಕೊರತೆಯು ತಮ್ಮಜೀವನದ ಅಪೂರ್ಣತೆಗೆ ಕಾರಣವಾಗುತ್ತದೆ.ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಹಾಗೂ ವೃತ್ತಿಜೀವನದ ಮುಂದಿನ ಸವಾಲುಗಳನ್ನು ಎದುರಿಸುವಲ್ಲಿ ಮಾನಸಿಕವಾಗಿ ಸಿದ್ದರಾಗಬೇಕು. ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ಸಾಕಾರಗೊಳಿಸಲು ಧೃಡ ಸಂಕಲ್ಪದೊಂದಿಗೆ ಮುನ್ನಡೆಯಬೇಕು ಸಕಾರಾತ್ಮಕ ಮನೋಭಾವ ,ಸ್ಪಷ್ಟವಾದ ಗುರಿ ಮತ್ತು ಪರಿಶ್ರಮದಿಂದ ವಿದ್ಯಾರ್ಥಿಗಳು ಯಶಸ್ಸಿನ ಶಿಖರ ತಲುಪಬಹುದುಎಂದು ಸಲಹೆ ನೀಡಿದರು.
ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯಉಪಾಧ್ಯಕ್ಷೆ ಡಾ.ಉಷಾಪ್ರಭಾಎನ್. ನಾಯಕ್‌ರವರು ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿ ಶಿಕ್ಷಣದ ಜೊತೆಗೆ ಮೌಲ್ಯಾಧಾರಿತ ಬದುಕಿನ ಅಗತ್ಯತೆಯನ್ನು ಮನದಟ್ಟುಗೊಳಿಸಿದರು. ಕಾಲೇಜಿನ ಶೈಕ್ಷಣಿಕ ಸಮಿತಿಯ ಸದಸ್ಯರಾದ ಬಿ. ವಿನಯ್‌ಕುಮಾರ್ ಇವರು ಶೈಕ್ಷಣಿಕಯೋಜನೆ , ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಹಾಗೂ ಅಧ್ಯಯನ ಕ್ರಮಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಮಾಹಿತಿ-ತಂತ್ರಜ್ಞಾನ ವಿಭಾಗದ ನಿರ್ದೇಶಕರಾದ ಅಂಕುಶ್. ಎನ್. ನಾಯಕ್‌ರವರು ತಂತ್ರಜ್ಞಾನ ಆಧಾರಿತ ಶಿಕ್ಷಣ ವ್ಯವಸ್ಥೆ, ಡಿಜಿಟಲ್ ಕಲಿಕಾ ವಿಧಾನಗಳು ಹಾಗೂ ಆನ್‌ಲೈನ್‌ ಅಧ್ಯಯನದ ಮಹತ್ತ್ವವನ್ನು ವಿವರಿಸಿದರು.ಆಧುನಿಕ ಶಿಕ್ಷಣದಲ್ಲಿ ತಂತ್ರಜ್ಞಾನದ ಬಳಕೆ ವಿದ್ಯಾರ್ಥಿಗಳ ಕಲಿಕೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸುತ್ತದೆ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಮಚಂದ್ರ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಕಾರ್ಯಕ್ರಮದ ಸಂಯೋಜಕಿಯಾದ ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿಯಾದ ರಾಧಿಕಾ ಭಟ್ ಹಾಗೂ ಇತರ ಉಪನ್ಯಾಸಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಉಜ್ವಲ್ ಪ್ರದೀಪ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಭರತ್‌ಚಂದ್ರ ಎಲ್ ವಂದನಾರ್ಪಣೆ ಸಲ್ಲಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!