spot_img
Monday, May 25, 2026
spot_img

ಜಿ ಎಮ್‌ನಲ್ಲಿ ರಾಷ್ಟ್ರೀಯ ಮಟ್ಟದ ಕಿರಿಯರ ತ್ರೋಬಾಲ್ ತರಬೇತಿ ಶಿಬಿರ

ಬ್ರಹ್ಮಾವರ ಮೇ. 22 ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಕರ್ನಾಟಕ ತ್ರೋಬಾಲ್ ಸಂಘ (ರಿ) ಮಂಡ್ಯ ಇವರ ಸಹಯೋಗದೊಂದಿಗೆ 36ನೇ ಕಿರಿಯ ಬಾಲಕ ಬಾಲಕಿಯರ ರಾಷ್ಟ್ರೀಯ ತ್ರೋಬಾಲ್ ಪಂದ್ಯಾಟದ ತರಬೇತಿ ಮತ್ತು ಆಯ್ಕೆ ಶಿಬಿರವನ್ನು ಮೇ 22 ರಿಂದ 28ರ ವರೆಗೆ ಆಯೋಜಿಸಿದೆ.
ಜಿ ಎಮ್ ಸಂಸ್ಥೆಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಜ್ಯೋತಿ ಬೆಳಗಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಶಿಬಿರಾರ್ಥಿಗಳು ತಮ್ಮ ಜವಾಬ್ದಾರಿಯನ್ನು ಅರಿತು ತ್ರೋಬಾಲ್ ಕ್ರೀಡೆಯಲ್ಲಿ ಕೌಶಲ್ಯವನ್ನು ಪಡೆದುಕೊಂಡು ನಮ್ಮ ದೇಶದ ಹಿರಿಮೆಗೆ ಕಲಶ ಪ್ರಾಯರಾಗಬೇಕೆಂದು ಹಾರೈಸಿದರು.
ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್‌ರವರು ತ್ರೋಬಾಲ್ ಪಂದ್ಯಾಟ ಅದರ ಮಹತ್ವವನ್ನು ತಿಳಿಸಿ ಪ್ರತೀ ಶಿಬಿರಾರ್ಥಿಯು ಪರಸ್ಪರ ಸಹಕಾರದಿಂದ ಶಿಬಿರದಲ್ಲಿ ಭಾಗವಹಿಸಿ ಉನ್ನತ ಮಟ್ಟ ತಲುಪಿ ಎಂದು ಶುಭಕೋರಿದರು.
ರಾಜ್ಯಮಟ್ಟದ ತ್ರೋಬಾಲ್ ತರಬೇತುದಾರ ಆನಂದತೀರ್ಥ ವಿದ್ಯಾಲಯದ ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ್ ಶೆಟ್ಟಿಯವರು ಶಿಬಿರದ ವಿವರಣೆ ಮತ್ತು ಮಹತ್ವದ ಮೂಲಕ ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು. ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಸೀತಾರಾಮ ಗೌಡ ಹಾಗೂ ರಾಜ್ಯ ತರಬೇತುದಾರರಾದ ಹರ್ಷ ಮತ್ತು ಸಂಜಯ್‌ರವರು ಮತ್ತು ಕರ್ನಾಟಕದ ವಿವಿಧ ಜಿಲ್ಲೆಗಳಿಂದ 30ಕ್ಕೂ ಹೆಚ್ಚು ರಾಷ್ಟ್ರೀಯ ಮಟ್ಟದ ತ್ರೋಬಾಲ್ ಆಟಗಾರರು ಉಪಸ್ಥಿತರಿದ್ದರು.
ಶ್ರೀಮತಿ ನೀಲಾವತಿ ಆಪ್ತ ಸಮಲೋಚಕಿ ಕಾರ್ಯಕ್ರಮ ನಿರೂಪಿಸಿ, ವಿಜಯಕುಮಾರ್ ಸ್ವಾಗತಿಸಿದರು. ಸುರೇಶ್ ನಾಯಕ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!