spot_img
Wednesday, May 27, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯ ಮಟ್ಟದ Rank ವಿಜೇತ 48 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯ ಮಟ್ಟದ ರ್‍ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯು ಮೇ 27ರಂದು ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಕೆ. ರಾಮಕೃಷ್ಣ ಕಾಮತ್ ಅವರು ವಹಿಸಿದ್ದರು.

ಮಾಜಿ ಸಚಿವರಾದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ನಿರಂತರ ಪ್ರಯತ್ನ ಯಶಸ್ಸಿಗೆ ದಾರಿ. ಯಾವುದೇ ಕೆಲಸದಲ್ಲಿ ಯಶಸ್ಸು ಕಾಣಲು ನಿರಂತರ ಪ್ರಯತ್ನ ಮತ್ತು ಕಾಯುವ ತಾಳ್ಮೆ ಇರಬೇಕು. ಶಿಕ್ಷಣ ಕೇವಲ ಪುಸ್ತಕದ ಜ್ಞಾನವಲ್ಲ, ಬದಲಿಗೆ ಜೀವನದ ಏಳು-ಬೀಳುಗಳನ್ನು ಎದುರಿಸುವ ಧೈರ್ಯ, ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯ ಮತ್ತು ಸಮಾಜದಲ್ಲಿ ಹೇಗೆ ಬದುಕಬೇಕು ಎಂಬುದನ್ನು ಕಲಿಸುವಂತಿರಬೇಕು ಎಂದರು.

ಅತಿಥಿಯಾಗಿ ಭಾಗವಹಿಸಿದ ಡಾ.ಬಿ. ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ ಹೆತ್ತವರು ತಮ್ಮ ಮಕ್ಕಳಿಗೆ ಸದ್ವಿಚಾರ, ಸಂಸ್ಕೃತಿ, ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಯಾವ ರೀತಿ ಕಾರ್ಯ ಪ್ರವೃತ್ತರಾಗಬೇಕು ಎನ್ನುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ೨೦೨೫-೨೬ ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ರ್‍ಯಾಂಕ್ ವಿಜೇತ 48 ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದೊಂದಿಗೆ ಬೆಳ್ಳಿ ಲೋಟ, ಬೆಳ್ಳಿ ನಾಣ್ಯ, ಫಲ ಪುಷ್ಪವನ್ನು ನೀಡಿ ಸನ್ಮಾನಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಪ್ರಸಕ್ತ ಶೈಕ್ಷಣಿಕ ಸಾಲಿನ ಕಾರ್ಯಯೋಜನೆಗಳ ಕುರಿತು ಮಾಹಿತಿ ನೀಡಿ, ಶೈಕ್ಷಣಿಕ ಪ್ರಗತಿಗೆ ಪೋಷಕರು ಉಪನ್ಯಾಸಕರ ಜೊತೆ ಸಹಕರಿಸಬೇಕೆಂದು ಸಲಹೆ ನೀಡಿದರು.

ವೇದಿಕೆಯಲ್ಲಿ ಸಂಸ್ಥೆಯ ಕಾರ್ಯದರ್ಶಿಯವರಾದ ರಾಧಾಕೃಷ್ಣ ಶೆಣೈ, ಖಜಾಂಚಿ ಕೆ. ಲಕ್ಷ್ಮೀ ನಾರಾಯಣ ಶೆಣೈ, ಉಪಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ಪ್ರಮೀಳಾ ಡಿಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸನ್ಮಾನಿತರ ಪಟ್ಟಿಯನ್ನು ಅರ್ಥಶಾಸ್ತ್ರ ಉಪನ್ಯಾಸಕ ಮಂಜುನಾಥ್ ಹಾಗೂ ಆಂಗ್ಲ ಭಾಷಾ ಉಪನ್ಯಾಸಕಿ ಅಮೃತಾ ವಾಚಿಸಿದರು, ಇಂಗ್ಲೀಷ್ ಉಪನ್ಯಾಸಕಿ ಸುಪ್ರೀತಾ ಶೆಟ್ಟಿ ಹಾಗೂ ಕನ್ನಡ ಉಪನ್ಯಾಸಕ ಸುಧೀರ್ ಅತಿಥಿಗಳನ್ನು ಪರಿಚಯಿಸಿದರು.

ಉಪಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್ ಸ್ವಾಗತಿಸಿದರು, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಭರತ್ ಚಂದ್ರ. ಕೆ ವಂದಿಸಿದರು. ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!