spot_img
Thursday, May 28, 2026
spot_img

ಜನಜಾಗೃತಿ ವೇದಿಕೆ ಕುಂದಾಪುರ ತಾಲೂಕು ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶೆಟ್ಟಿ ಆಯ್ಕೆ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಕುಂದಾಪುರ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕುಂದಾಪುರ ತಾಲೂಕು ಇದರ ವತಿಯಿಂದ ವಾರ್ಷಿಕ ಸಭೆ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕುಂದಾಪುರ ತಾಲೂಕು ಅಧ್ಯಕ್ಷರಾದ ನ್ಯಾಯವಾದಿ ಉಮೇಶ್ ಶೆಟ್ಟಿ ಶಾನ್ಕಟ್ ವಹಿಸಿದ್ದರು.

ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಯು.ಎಸ್. ಶಣೈ ಹಾಗೂ ಸುಬ್ರಹ್ಮಣ್ಯ ಶೆಟ್ಟಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕುಂದಾಪುರ ತಾಲೂಕು-೧ ಯೋಜನಾಧಿಕಾರಿ ಉಮೇಶ್ ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು-೨ ಯೋಜನಾಧಿಕಾರಿ ಸುಧೀರ್ ಹಂಗ್ಳೂರು ಹಾಗೂ ಜನಜಾಗೃತಿ ವೇದಿಕೆ ಪ್ರಾದೇಶಿಕ ಕಚೇರಿ ಉಡುಪಿ ಮೇಲ್ವಿಚಾರಕ ಉದಯ ಉಪಸ್ಥಿತರಿದ್ದರು.

ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಜಿಲ್ಲಾ ಜನಜಾಗೃತಿ ಸದಸ್ಯರಾದ ಸುಬ್ರಹ್ಮಣ್ಯ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆ ಸದಸ್ಯರು ಹಾಗೂ ಗಣ್ಯರು ಭಾಗವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!