spot_img
Saturday, May 30, 2026
spot_img

ಕರ್ನಾಟಕದಲ್ಲಿ ಪ್ರಥಮ ಭೀಮೋದ್ಯಮ ಉದ್ಘಾಟನೆ| ಯುವ ಉದ್ಯಮಿಗಳಿಗೆ ಸ್ಪೂರ್ತಿ ನೀಡುವ ಕೆಲಸವಾಗಲಿ-ಸಂಸದ ಕೋಟ

ಹೆಮ್ಮಾಡಿ: ಯುವಜನತೆಗೆ ಉದ್ಯೋಗವಕಾಶಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಅವರಿಗೆ ಆತ್ಮವಿಶ್ವಾಸ ಮೂಡಿಸುವ ಕೆಲಸ ಆಗಬೇಕು. ಪರಿಶಿಷ್ಟ ಜಾತಿ, ಪಂಗಡದ ಯುವ ಜನತೆಗೆ ಅವರ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗವಕಾಶಗಳನ್ನು ಕಲ್ಪಿಸಿಕೊಡಲು ಸೂಕ್ತ ಸಾಲ ಸೌಲಭ್ಯವನ್ನು ನೀಡಲು ಇಲಾಖೆಗಳು ಶ್ರಮ ವಹಿಸಬೇಕು. ಆ ನಿಟ್ಟಿನಲ್ಲಿ ಕರ್ನಾಟಕದ ೨೨೪ ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಬಾರಿಗೆ ಬೈಂದೂರು ಕ್ಷೇತ್ರದ ಶಾಸಕರು ಭೀಮೋದ್ಯಮ ಎನ್ನುವ ಕಾರ್ಯಕ್ರಮ ಆಯೋಜಿಸಿದ್ದಾರೆ. ಇದರಿಂದ ಪ್ರೇರಿತರಾಗಿ ಒಂದಿಷ್ಟು ಯುವಜನತೆ ಉದ್ಯೋಗ ಆರಂಭಿಸಿ ಅವರು ಹತ್ತಾರು ಜನರಿಗೆ ಉದ್ಯೋಗ ನೀಡಿದರೆ ಈ ಕಾರ್ಯಕ್ರಮ ಸಾರ್ಥಕತೆ ಪಡೆಯುತ್ತದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಶಾಸಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸಮೃದ್ಧ ಬೈಂದೂರು ಪರಿಕಲ್ಪನೆಯಡಿ ಶಾಸಕ ಗುರುರಾಜ ಗಂಟಿಹೊಳೆ ಅವರ ಕಲ್ಪನೆಯಂತೆ ಯುವಜನರಲ್ಲಿ ಸ್ವಾವಲಂಬನೆ ಮತ್ತು ಉದ್ಯಮಶೀಲತೆಯ ಮನೋಭಾವ ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ಆಯೋಜಿಸಲಾದ “ಭೀಮೋದ್ಯಮ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ ಶೆಟ್ಟಿ ಮಾತನಾಡಿ, ಇದೊಂದು ವಿಶಿಷ್ಟ ಕಾರ್ಯಕ್ರಮ. ಭೀಮೋದ್ಯಮದ ಮೂಲಕ ಎಸ್.ಸಿ.ಎಸ್.ಟಿ ಸಮುದಾಯದ ಯುವಜನತೆ ಉದ್ಯೋಗವಕಾಶಗಳನ್ನು ಆರಂಭಿಸಲಿ. ಅವರ ಉದ್ಯಮ ಆರಂಭಕ್ಕೆ ಪ್ರೇರಣೆ ನೀಡುವ, ಸಾಲ ಸೌಲಭ್ಯಗಳನ್ನು ಒದಗಿಸುವ ಹೊಣೆಗಾರಿಕೆ ಸಂಬಂಧಪಟ್ಟ ಇಲಾಖೆಯವರು ಮಾಡಬೇಕು ಎಂದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು, “ಯುವಕರು ಸರ್ಕಾರಿ ಉದ್ಯೋಗಗಳ ನಿರೀಕ್ಷೆಯಲ್ಲಿ ಕಾಲ ಕಳೆಯುವುದಕ್ಕಿಂತ ಸ್ವಂತ ಉದ್ಯಮ ಆರಂಭಿಸಿ ಆತ್ಮನಿರ್ಭರರಾಗಬೇಕು. ಉದ್ಯಮಶೀಲತೆಯ ಮೂಲಕ ಗ್ರಾಮೀಣ ಆರ್ಥಿಕತೆ ಬಲಗೊಳ್ಳಲಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಆರು ಮಂದಿ ಸಾಧಕರನ್ನು ಸನ್ನಾನಿಸಲಾಯಿತು. ಉದ್ಯೋಗ ಮಾರ್ಗದರ್ಶಿ ಕೈಪಿಡಿ ಬಿಡುಗಡೆ ಮಾಡಲಾಯಿತು.

ಭೀಮೋದ್ಯಮ ಕಾರ್ಯಕ್ರಮದ ಮೂಲಕ ವಿವಿಧ ಕ್ಷೇತ್ರಗಳ ಪರಿಣಿತರು ಉದ್ಯಮ ಸ್ಥಾಪನೆ, ಸಾಲ ಸೌಲಭ್ಯಗಳು, ಮಾರುಕಟ್ಟೆ ಅವಕಾಶಗಳು ಹಾಗೂ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮಕ್ಕೆ ಭಾಗವಹಿಸಿದ ಯುವ ಸಮೂಹವು ಉತ್ತಮ ಸ್ಪಂದನೆ ವ್ಯಕ್ತಪಡಿಸಿತು.

ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತರಾದ ವಾದಿರಾಜ್, ಎಸ್‌ಸಿ-ಎಸ್‌ಟಿ ಅಧ್ಯಯನ ಟ್ರಸ್ಟ್‌ನ ಮೋಹನ್ ಲಿಂಗಯ್ಯ ಸ್ವಾಮಿ, ರಾಜ್ಯ ಎಸ್‌ಸಿ ಮೋರ್ಚಾ ಉಪಾಧ್ಯಕ್ಷರಾದ ದಿನಕರ್ ಬಾಬು, ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷರಾದ ಕೃಷ್ಣಮೂರ್ತಿ, ಕೊಲ್ಲೂರು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಲಿಂಗ ನಾಯ್ಕ್, ಮಂಡಲ ಅಧ್ಯಕ್ಷರಾದ ಅನಿತಾ ಆರ್. ಕೆ., ಮಂಡಲ ಉಪಾಧ್ಯಕ್ಷರಾದ ಮಾಲತಿ ನಾಯ್ಕ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!